ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ದಿನೇ ದಿನೇ ಹೆಚ್ಚಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 155 ಡೆಂಗ್ಯೂ ಕೇಸ್ಗಳು ಪತ್ತೆಯಾಗಿವೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 107 ಹೊಸ ಕೇಸ್ಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟಾರೆ 343 ಸಕ್ರಿಯ ಡೆಂಗ್ಯೂ ಪ್ರಕರಣಗಳು ಇವೆ. ಡೆಂಗ್ಯೂ ಸೋಂಕಿನಿಂದ ಜನವರಿಯಿಂದ ಈವರೆಗೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 899 ಮಂದಿಗೆ ಡೆಂಗ್ಯೂ ಟೆಸ್ಟ್ ನಡೆಸಲಾಗಿದ್ದು, ಈ ಪೈಕಿ 155 ಮಂದಿಗೆ ಡೆಂಗ್ಯೂ ದೃಢವಾಗಿದೆ. ಬೆಂಗಳೂರಿನಲ್ಲಿ 107, ಚಿತ್ರದುರ್ಗ 10, ದಾವಣಗೆರೆ 4, ಶಿವಮೊಗ್ಗ 9, ಉತ್ತರ ಕನ್ನಡ 2, ವಿಜಯನಗರ 4, ಹಾಸನ 16 ಉಡುಪಿಯಲ್ಲಿ 3 ಕೇಸ್ಗಳು ಪತ್ತೆಯಾಗಿವೆ. 343 ಸಕ್ರಿಯ ಪ್ರಕರಣಗಳ ಪೈಕಿ 142 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ