ಬೆಂಗಳೂರು:– ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಜೋರಾಗಿದ್ದು, ಇಂದು ಒಂದೇ ದಿನ 435 ಪ್ರಕರಣ ಪತ್ತೆ ಆಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 435 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಸದ್ಯ 334 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸೋಮವಾರ ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಂದಿಗೆ ಡೆಂಗ್ಯೂ (Dengue Fever) ದೃಢಪಟ್ಟಿರುವುದು ಕಂಡುಬಂದಿದೆ.
ಕಳೆದ 24 ಗಂಟೆಗಳಲ್ಲಿ 4989 ಮಂದಿಗೆ ಟೆಸ್ಟ್ ಮಾಡಲಾಗಿದ್ದು, ಈ ಪೈಕಿ 435 ಮಂದಿಗೆ ಸೋಂಕು ದೃಢಪಟ್ಟಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಬಿಬಿಎಂಪಿ 363, ಬೆಂಗಳೂರು ನಗರ 1, ಬೆಂಗಳೂರು ಗ್ರಾಮಾಂತರ 5, ಚಿಕ್ಕಬಳ್ಳಾಪುರ 5, ಶಿವಮೊಗ್ಗ 1, ಬಾಗಲಕೋಟೆ 2, ಧಾರವಾಡ 14, ಯಾದಗಿರಿ 1, ಬಳ್ಳಾರಿ 3, ಕೊಪ್ಪಳ 4, ಮಂಡ್ಯ ಜಿಲ್ಲೆಯಲ್ಲಿ 36 ಪ್ರಕರಣ ದಾಖಲಾಗಿವೆ. ಸದ್ಯ ರಾಜ್ಯದಲ್ಲಿ ಒಟ್ಟ 334 ಸಕ್ರಿಯ ಪ್ರಕರಣಗಳು ಇವೆ.