ದಿಸ್ಪುರ್: ಭಾರತ್ ಜೋಡೋ ನ್ಯಾಯ ಯಾತ್ರೆ (Bharat Jodo Nyay yatra) ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಅಸ್ಸಾಂ ರಾಜ್ಯದಲ್ಲಿ ದೇಗುಲವೊಂದರ ಪ್ರವೇಶಕ್ಕೆ ಅನುಮತಿ ನಿರಾಕರಿಸಿರುವ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ ರಾಹುಲ್ ಗಾಂಧಿ (Rahul Gandhi) ನಾನೇನು ಅಂತಹ ಅಪರಾಧ ಮಾಡಿದ್ದೇನೆ ಎಂದು ಪ್ರಶ್ನಿಸಿದ್ದಾರೆ.
ಅಸ್ಸಾಂ ರಾಜ್ಯದ ನಾಗೋನ್ನಲ್ಲಿರುವ ಬಟದ್ರವ ಸತ್ರಾ ದೇಗುಲಕ್ಕೆ (Batadrava Satra Temple) ರಾಹುಲ್ ಗಾಂಧಿ ತೆರಳಿದ್ದರು. ಆದರೆ, ದೇವಾಲಯ ಪ್ರವೇಶಿಸಲು ಅನುಮತಿ ನಿರಾಕರಿಸಲಾಯಿತು. ಈ ವೇಳೆ ದೇಗುಲದ ಆಡಳಿತ ಮಂಡಳಿಗೆ ಪ್ರಶ್ನೆ ಮಾಡಿದ ರಾಹುಲ್ ಗಾಂಧಿ, ನನಗೆ ನಿರ್ಬಂಧ ವಿಧಿಸಿರೋದು ಏಕೆ? ಎಂದು ಪ್ರಶ್ನಿಸಿದರು.
Ram Mandir: ಅಯೋಧ್ಯಾ ನಗರಿಯಲ್ಲಿ ವಿರಾಜಮಾನನಾದ ಬಾಲರಾಮ: ಹಿಂದೂಗಳ ಕನಸು ನನಸು!
ನಾವು ದೇಗುಲಕ್ಕೆ ಭೇಟಿ ನೀಡಲು ಬಯಸಿದ್ದೇವೆ. ಆದರೆ, ನಮಗೆ ಅವಕಾಶ ನೀಡುತ್ತಿಲ್ಲ. ನಾವು ಮಾಡಿದ ಅಪರಾಧವಾದ್ರೂ ಏನು ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ನಾವು ಯಾವುದೇ ತಪ್ಪು ಮಾಡಿಲ್ಲ. ಯಾವುದೇ ಸಮಸ್ಯೆ ಸೃಷ್ಟಿಸಲು ಬಂದಿಲ್ಲ. ನಾವು ಕೇವಲ ಪ್ರಾರ್ಥನೆ ಸಲ್ಲಿಸಲು ದೇಗುಲಕ್ಕೆ ಬಂದಿದ್ದೆವು ಎಂದು ರಾಹುಲ್ ಗಾಂಧಿ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ಧಾರೆ.