ಕೋಲಾರ : ಹಾಸ್ಟಲ್ಗಳಲ್ಲಿ ಪ್ರಧಾನವಾಗಿ ಸ್ವಚ್ಛತೆಯನ್ನು ಕಾಪಾಡಬೇಕು. ಅಕ್ಕಿ, ಎಣ್ಣೆ ಹಾಗೂ ತರಕಾರಿಗಳ ಗುಣಮಟ್ಟವನ್ನು ಪರಿಶೀಲಿಸಿ ಅಡುಗೆಗೆ ಬಳಸುವುದರಿಂದ ಉತ್ತಮವಾದ ಆರೋಗ್ಯವನ್ನು ಕಾಪಾಡಬಹುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಮಂಗಳಾರವರು ಹೇಳಿದರು.
Hubballi: ಅಧಿವೇಶನದಲ್ಲಿ ಶಿಕ್ಷಕರ ಬೇಡಿಕೆ ಚರ್ಚೆಗೆ ಅವಕಾಶ, ಸಭಾಪತಿ ಬಸವರಾಜ ಹೊರಟ್ಟಿ ಭರವಸೆ!
ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ವಸತಿ ನಿಲಯ ಮತ್ತು ವಸತಿ ಶಾಲೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಹಾಗೂ ತಂಬಾಕು ನಿಯಂತ್ರಣ ಕಾಯ್ದೆಯ ಬಗ್ಗೆ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು,
ಹಾಸ್ಟಲ್ಗಳಲ್ಲಿನ ಅಡುಗೆ ಕೋಣೆಗಳ ಸ್ವಚ್ಛತೆ, ಪಾತ್ರಗಳ ಸ್ವಚ್ಛತೆ ಕಡೆಗೆ ಗಮನಹರಿಸಬೇಕು, ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಅಡುಗೆಗೆ ಬಳಸಬೇಕು, ಅಡುಗೆ ಸಾಮಗ್ರಿಗಳನ್ನು ಸೂಕ್ತ ಸ್ಥಳಗಳಲ್ಲಿ ಶೇಖರಣೆ ಮಾಡಬೇಕು. ಸಲಕರಣೆಗಳನ್ನು ನಿರ್ದಿಷ್ಟ ಸಮಯಕ್ಕೆ ಸದುಪಯೋಗ ಪಡಿಸಿಕೊಂಡು ಅವುಗಳನ್ನು ಬಳಸಬೇಕು. ಅಡುಗೆ ಸಿಬ್ಬಂದಿಯವರು ಸ್ವಚ್ಛ ಉಡುಗೆ ತೊಡುಗೆಗಳನ್ನು ಧರಿಸಿಕೊಂಡು ಅಡುಗೆ ಮಾಡಬೇಕು ಎಂದರು.