ಬೆಂಗಳೂರು: ಉಪ ಸಭಾಪತಿ ರುದ್ರಪ್ಪ ಲಮಾಣಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಶಾಸಕರು ಗಾಯಗೊಂಡಿರುವ ಘಟನೆ ನಡೆದಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನಿಂದ ಹಾವೇರಿಗೆ ತೆರಳುವ ಮಾರ್ಗ ಮಧ್ಯ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜೆ.ಜೆ.ಹಳ್ಳಿ ಗ್ರಾಮದ ಬಳಿ ರಸ್ತೆ ಅಪಘಾತ ಸಂಭವಿಸಿದೆ.
ಕೂಡಲೇ ಅವರನ್ನು ದಾವಣಗೆರೆಯ S.S.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದ್ರೆ, ಇದೀಗ ಏಕಾಏಕಿ ರುದ್ರಪ್ಪ ಲಮಾಣಿ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಸಹಜವಾಗಿಯೇ ಬೆಂಬಲಿಗರಲ್ಲಿ ಆತಂಕ ಮೂಡಿಸಿದೆ.
ಕಾರಿನಲ್ಲಿ ನೀರಿನ ಬಾಟಲಿಗಳನ್ನು ಇಟ್ಟುಕೊಳ್ಳುವ ಅಭ್ಯಾಸವಿದೆಯೇ? ಹಾಗಾದ್ರೆ ಕ್ಯಾನ್ಸರ್ ಇರಬಹುದು! ಎಚ್ಚರ
ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ ಅವರು ಬೆಂಗಳೂರಿನಿಂದ ಕರ್ನಾಟಕ ವಿಧಾನ ಮಂಡಲ ಅಧಿವೇಶನ ಮುಗಿಸಿಕೊಂಡು ಹಾವೇರಿ ಜಿಲ್ಲೆಯ ಕುಮಾರಪಟ್ಟಣಂ ಸಮೀಪದ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.
ಉಪ ಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ ಅವರು ಹಿರಿಯೂರು ತಾಲೂಕಿನ ಜೆಜಿ ಹಳ್ಳಿ ಸಮೀಪ ಎಳನೀರು ಕುಡಿಯಲು ಕಾರು ನಿಲ್ಲಿಸಿದ್ದರು. ಈ ವೇಳೆ ಮೂತ್ರ ವಿಸರ್ಜನೆಗೆಂದು ಸರ್ವಿಸ್ ರಸ್ತೆ ದಾಟುವಾಗ ವ್ಯಕ್ತಿಯೊಬ್ಬರ ಬೈಕ್ ಡಿಕ್ಕಿಯಾಗಿದೆ.
ಬೈಕ್ ಬಂದು ಗುದ್ದಿದ ರಭಸಕ್ಕೆ ರುದ್ರಪ್ಪ ಮಾನಪ್ಪ ಲಮಾಣಿ ಅವರು ನೆಲಕ್ಕೆ ಬಿದ್ದ ಪರಿಣಾಮ ಅವರ ಹಣೆ, ಹಲ್ಲು ಹಾಗೂ ಬಲ ಮೊಣಕಾಲಿಗೆ ಪೆಟ್ಟು ಬಿದ್ದಿದೆ. ತಕ್ಷಣವೇ ಉಪ ಸಭಾಪತಿಗಳಿಗೆ ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಎಸ್ಎಸ್ ಆಸ್ಪತ್ರೆಗೆ ಅವರನ್ನು ಕಳುಹಿಸಲಾಗಿತ್ತು. ಇದೀಗ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.