ಬೆಂಗಳೂರು:- ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿ ಮತ್ತು ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಹಿನ್ನೆಲೆ ಕಿಡಿಗೇಡಿಗಳ ವಿರುದ್ಧ FIR ದಾಖಲಾಗಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದೆ.
ಫೇಸ್ಬುಕ್, ಇನ್ಸ್ಟಾಗ್ರಾಂನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದು, ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಕಾರ್ಯದರ್ಶಿ, ಕಾಂಗ್ರೆಸ್ ಮುಖಂಡ ಸಂಜಯ್ ಯಾದವ್ ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ‘ಕೃತಿಕಾ ಕೃತಿ’ ಎಂಬ ಹೆಸರಿನ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿಯ ವಿರುದ್ಧ ಅಶ್ಲೀಲವಾಗಿ ನಿಂದಿಸಿ ಅವಹೇಳನ ಮಾಡಿದ್ದು, ಜೊತೆಗೆ ಗೌರವಕ್ಕೆ ಧಕ್ಕೆ ತರಲಾಗಿದೆ. ಹಾಗಾಗಿ ಈ ಪೋಸ್ಟ್ಗಳನ್ನು ಹಾಕಿದವರನ್ನು ಪತ್ತೆ ಹಚ್ಚಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹೈಗ್ರೌಂಡ್ಸ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.