ಬೆಂಗಳೂರು:– ದಿನೇಶ್ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಬಂಧ ಶಾಸಕ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ.
ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬ ಹೇಳಿಕೆಯನ್ನು ಯತ್ನಾಳ್ ಹೇಳಿದ್ದರು. ಹೀಗಾಗಿ ಈ ಹೇಳಿಕೆ ಖಂಡಿಸಿ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ದೂರು ದಾಖಲಿಸಲಾಗಿದೆ. ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬಸ್ಥರನ್ನು ಅವಮಾನಿಸಿದ್ದಾರೆ. ಚುನಾವಣೆ ಹೊತ್ತಲ್ಲಿ ಕೋಮು ಸೌಹಾರ್ದತೆ ಹಾಳು ಮಾಡಲು ಈ ರೀತಿ ಮಾತಾಡುತ್ತಿದ್ದಾರೆ. ಇದೊಂದು ದೇಶ ವಿರೋಧಿ ಹೇಳಿಕೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.
ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಕ್ರಮ – ಯಾರದ್ದೋ ಜಮೀನು, ಮತ್ತ್ಯಾರದ್ದೊ ಹೆಸರಲ್ಲಿ!
ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ‘ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್ನಲ್ಲಿ ಬಿಜೆಪಿ ಕಾರ್ಯಕರ್ತ ವಿಚಾರಣೆ ನಡೆಸಿದ್ದ ಎನ್ಐಎ ವಿಚಾರಕ್ಕೆ ಸಂಬಂಧಿಸಿದಂತೆ ಮಾತಾನಾಡುವಾಗ ದಿನೇಶ್ ಗುಂಡೂರಾವ್ ಕುಟುಂಬದ ಬಗ್ಗೆ ಮಾತಾಡಿದ್ದರು. ಈ ವೇಳೆ ಸಚಿವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದಿದ್ದರು. ಇದೀಗ ಈ ಕುರಿತು ದೂರು ದಾಖಲಾಗಿದೆ.