ಟಾಲಿವುಡ್ ಖ್ಯಾತ ನಟ ನಾಗಾರ್ಜುನ ಅವರ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ತೆಲಂಗಾಣ ಸಚಿವೆ ಕೊಂಡಾ ಸುರೇಖಾ ಅವರಿಗೆ ಹೈದರಾಬಾದ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಸುರೇಖಾ ಅವರು ಕಳೆದ ಅಕ್ಟೋಬರ್ನಲ್ಲಿ ನಾಗಾರ್ಜುನ ಅವರ ಮಗ ನಾಗ ಚೈತನ್ಯ ಮತ್ತು ಸಮಂತಾ ರುತ್ ಪ್ರಭು ಅವರ ವಿಚ್ಛೇದನಕ್ಕೆ ಸಂಬಂಧಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಸುರೇಖಾ ವಿರುದ್ಧ ನಟ ನಾಗಾರ್ಜುನ ಅವರು ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಡಿಸೆಂಬರ್ 12 ರಂದು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗುವಂತೆ ಹೈದರಾಬಾದ್ ನ್ಯಾಯಾಲಯವು ಗುರುವಾರ ಸಮನ್ಸ್ ನೀಡಿದೆ.
ಅಬಕಾರಿ ಪ್ರಕರಣಗಳ ವಿಶೇಷ ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ (ಜೆಎಫ್ಸಿಎಂ) ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 356 (ಮಾನನಷ್ಟ) ಅಡಿಯಲ್ಲಿ ಸುರೇಖಾ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.
ಅರಣ್ಯ ಸಚಿವೆ ಸುರೇಖಾ ಅವರು ನಾಗ ಚೈತನ್ಯ ಮತ್ತು ಸಮಂತಾ ರುತ್ ಪ್ರಭು ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಬಳಿಕ ರಾಜಕೀಯ ನಾಯಕರು ಮತ್ತು ತೆಲುಗು ಚಿತ್ರರಂಗದಿಂದ ತೀವ್ರ ವಿರೋಧ ಎದುರಿಸಿದ್ದರು. ಇದರಿಂದ ಬಳಿಕ ಅವರು ತಮ್ಮ ಹೇಳಿಕೆಗಳನ್ನು ಹಿಂದಕ್ಕೆ ಪಡೆದಿದ್ದರು.