ಬೆಂಗಳೂರು:- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಯತ್ನಾಳ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ರಾಹುಲ್ ಗಾಂಧಿ ಹಾಗೂ ಧರ್ಮಗಳ ವಿರುದ್ಧ ಅವಹೇಳನಕಾರಿ ಪದ ಬಳಸಿದ್ದಾರೆ. ಹೀಗಾಗಿ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ ಎಂದು ದೂರು ಕೊಟ್ಟಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ನೀಡಿದ ದೂರಿನ ಆಧಾರದ ಮೇಲೆ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.