ಡೆಲ್ಲಿ ವಿರುದ್ಧ ಪಂದ್ಯದಲ್ಲಿ ಸೋತರೂ ಕೂಡ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ MS ಧೋನಿ ಮೂರು ವಿಶೇಷ ದಾಖಲೆ ಬರೆದಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಧೋನಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಅಂತಿಮ ಓವರ್ಗಳ ವೇಳೆ ಬಿರುಸಿನ ಬ್ಯಾಟಿಂಗ್ ನಡೆಸಿದ ಧೋನಿ 16 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ ಅಜೇಯ 37 ರನ್ ಬಾರಿಸಿದರು. ಈ ರನ್ಗಳೊಂದಿಗೆ ಧೋನಿ ಹಲವು ದಾಖಲೆಗಳನ್ನು ಸಹ ಬರೆದಿದ್ದಾರೆ. ಆ ದಾಖಲೆಗಳಾವುವು ಎಂದರೆ…
IPL 2024: ಡೆಲ್ಲಿಗೆ ಮೊದಲ ಜಯ: ಚೆನ್ನೈ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಪಂತ್ ಪಡೆ!
ಈ ಪಂದ್ಯದ ಕೊನೆಯ ಓವರ್ನಲ್ಲಿ 2 ಸಿಕ್ಸ್ ಸಿಡಿಸುವುದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅಂತಿಮ ಓವರ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಹೆಗ್ಗಳಿಕೆಗೆ ಪಾತ್ರರಾದರು. ಧೋನಿ ಕೊನೆಯ ಓವರ್ನಲ್ಲಿ ಎದುರಿಸಿದ ಒಟ್ಟು 303 ಎಸೆತಗಳಲ್ಲಿ 61 ಸಿಕ್ಸ್ಗಳನ್ನು ಸಿಡಿಸಿ ಈ ಸಾಧನೆ ಮಾಡಿದ್ದಾರೆ.
ಹಾಗೆಯೇ ಈ ಪಂದ್ಯದಲ್ಲಿ ಅಜೇಯ 37 ರನ್ ಬಾರಿಸುವುದರೊಂದಿಗೆ ಟಿ20 ಕ್ರಿಕೆಟ್ನಲ್ಲಿ 7 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಏಷ್ಯಾದ ಮೊದಲ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ವಿಶ್ವದ ಮೂರನೇ ಆಟಗಾರ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ