ಕೋಲ್ಕತ್ತಾ: ಹಣಕಾಸು ಅವ್ಯವಹಾರ ಪ್ರಕಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (Kolkata’s RG Kar hospital) ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನ ಕೇಂದ್ರೀಯ ತನಿಖಾ ದಳ (CBI) ಬಂಧಿಸಿದೆ.
ಆಧಾರ್ ಕಾರ್ಡ್ ಉಚಿತವಾಗಿ ಅಪ್ಡೇಟ್ ಮಾಡಲು ಡಿಸೆಂಬರ್ 14ರವರೆಗೂ ಗಡುವು!
ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರ ನಾಶ ಆರೋಪಕ್ಕೆ ಆರೋಪದ ಮೇಲೆ ಸಂದೀಪ್ ಘೋಷ್ ಅವರನ್ನ ಬಂಧಿಸಿರುವುದಾಗಿ ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜೊತೆಗೆ ಎಫ್ಐಆರ್ ದಾಖಲಿಸಲು ವಿಳಂಬ ಹಾಗೂ ಸಾಕ್ಷ್ಯ ನಾಶ ಮತ್ತು ಪ್ರಕರಣದ ದಾರಿ ತಪ್ಪಿಸಿದ ಆರೋಪದ ಮೇಲೆ ತಲಾ ಪೊಲೀಸ್ ಠಾಣೆಯ ಅಧಿಕಾರಿ ಅಭಿಜಿತ್ ಮೊಂಡಲ್ ಅವರನ್ನೂ ಸಿಬಿಐ ಬಂಧಿಸಿದೆ.
ಇದೇ ತಿಂಗಳ ಸೆಪ್ಟೆಂಬರ್ 2ರಂದು ಆರ್.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಿಬಿಐ ಬಂಧಿಸಿತ್ತು. ಬಳಿಕ ಆರ್ಥಿಕ ಅವ್ಯವಹಾರಗಳ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿದ ಕೋಲ್ಕತ್ತಾ ಹೈಕೋರ್ಟ್ (Kolkata High Court) ಆದೇಶವನ್ನು ಪ್ರಶ್ನಿಸಿ ಘೋಷ್ (Sandip Ghosh) ಅರ್ಜಿ ಸಲ್ಲಿಸಿದ್ದರು, ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.