ಬೆಂಗಳೂರು : ಕಳ್ಳತನವನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಕ್ ಇಲಿಯಾಸ್ ಮತ್ತು ಎರಕಲ ಕಾವಡಿ ನಾಗೇಂದ್ರ ಬಂಧಿತ ಆರೋಪಿಗಳಾಗಿದ್ದು, ಇವರು ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಮ್ಮ ಸಹಚರರೊಂದಿಗೆ ಸೇರಿ ಕಳ್ಳತನ ಮಾಡುತ್ತಿದ್ದರು. ಹೀಗಾಗಿ ಖಚಿತ ಮಾಹಿತಿ ಹಿನ್ನೆಲೆ ಕಾರ್ಯಚರಣೆ ಕೈಗೊಂಡ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಇನ್ನೂ ಬಂಧಿತರಿಂದ 35 ಲಕ್ಷ ಬೆಲೆ ಬಾಳುವ 650 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.
