ಬೆಂಗಳೂರು: ಕಾಂಗ್ರೆಸ್ಗೆ ನೀಡುವ ಮತ ಅರಾಜಕತೆ, ಆರ್ಥಿಕ ದಿವಾಳಿತನ, ಭ್ರಷ್ಟಾಚಾರಕ್ಕೆ ನೀಡುವ ಮತವಾಗುತ್ತದೆ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಬಿಎಸ್ ಯಡಿಯೂರಪ್ಪ ವ್ಯಾಖ್ಯಾನಿ ಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸುಳ್ಳು ಆಶ್ವಾಸನೆಯಿಂದ ಅಭಿವೃದ್ದಿ ಕುಂಠಿತವಾಗಿದೆ. ಬಿಜೆಪಿ 400 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ಕರ್ನಾಟಕದಲ್ಲಿ 28 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಹಣ ಬಿಡುಗಡೆ ಮಾಡುವುದು ಕೇಂದ್ರದ ಕರ್ತವ್ಯ, ತಕ್ಷಣ ಹಣ ಬಿಡುಗಡೆ ಮಾಡಲಿದೆ. ಅದರಲ್ಲಿ ಭೇದಭಾವ ಇಲ್ಲ. ಬೇರೆ ಬೇರೆ ಕಾರಣದಿಂದ ಹಣ ಬಿಡುಗಡೆ ವಿಳಂಬ ಆಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ ಎಂದರು.
![Demo](https://ainlivenews.com/wp-content/uploads/2023/12/spoorthi-1.jpg)
Old Pension Scheme: ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಹಳೆಯ ಪಿಂಚಣಿಗೆ ಮಹತ್ವದ ಆದೇಶ
ರಾಜ್ಯ ಸರ್ಕಾರ ಆಶ್ವಾಸನೆ ನೀಡಿದ 10 ಕೆಜಿ ಅಕ್ಕಿಯಲ್ಲಿ ಒಂದು ಕಾಳು ನೀಡದೆ ಇರುವುದು ಸಾಧನೆ. 54 ಲಕ್ಷ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ಪ್ರತಿ ತಿಂಗಳು 6 ಸಾವಿರ ನೀಡುತ್ತಿದೆ. ನಾನು 4000 ಸೇರಿಸಿ ಕೊಡುತ್ತಿದ್ದೆ. ಆದರೆ ಅದನ್ನು ಸಿದ್ದರಾಮಯ್ಯ ಸರ್ಕಾರ ನಿಲ್ಲಿಸಿದೆ. ಈ ಮೂಲಕ ಸರ್ಕಾರ ದಿವಾಳಿಯಾಗಿದೆ ಎಂದು ಆರೋಪಿಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)