ಮಂಗಳೂರು;- ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಭಕ್ತರಿಗೆ ವಿಶೇಷ ಮನವಿ ಮಾಡಲಾಗಿದೆ. ವಿಜಯಪುರ-ಮಂಗಳೂರು ರೈಲಿನ ವೇಳಾಪಟ್ಟಿ ಪರಿಷ್ಕರಣೆ ಮಾಡಬೇಕು ಮತ್ತು ಈ ರೈಲನ್ನು ಮಂಗಳೂರು ಸೆಂಟ್ರಲ್ ತನಕ ವಿಸ್ತರಣೆ ಮಾಡಬೇಕು ಎಂದು ಬೇಡಿಕೆ ಮುಂದಿಟ್ಟುಕೊಂಡು ಆನ್ಲೈನ್ ಸಹಿ ಅಭಿಯಾನ ನಡೆಸಲಾಗುತ್ತಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆಯೂ ಸಿಕ್ಕಿದೆ.
ಆನ್ಲೈನ್ ಸಹಿ ಅಭಿಯಾನಕ್ಕೆ ಬೆಂಬಲ ನೀಡುವಂತೆ ಕುಕ್ಕೆ ಸುಬ್ರಮಣ್ಯ ಮತ್ತು ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರಿಗೆ ಮನವಿ ಮಾಡಲಾಗಿದೆ. ಈ ಕುರಿತು ಫೇಸ್ಬುಕ್ ಪೋಸ್ಟ್ ಹಾಕಲಾಗಿದೆ, ಸಹಿ ಮಾಡಲು ಲಿಂಕ್ ಸಹ ನೀಡಲಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ಫೇಸ್ಬುಕ್ ಪೋಸ್ಟ್ನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಜಯಪುರ, ಗದಗ, ಬಾಗಲಕೋಟೆ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಚಿಕ್ಕಮಗಳೂರು, ಹಾಸನ ಸೇರಿ ನೆರೆ ಜಿಲ್ಲೆಗಳ ಭಾಗಗಳಿಂದ ರೈಲಿನಲ್ಲಿ ಬರುವ ಭಕ್ತಾದಿಗಳ ಬಳಿ ನಮ್ಮದೊಂದು ಮನವಿ ಎಂದು ತಿಳಿಸಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)