ಧಾರವಾಡ:- ಜಿಲ್ಲೆಯಲ್ಲಿ ಯಾವುದೇ ಕೊವಿಡ್ ಪ್ರಕರಣವಿಲ್ಲ, ಗಾಬರಿ ಬೇಡ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದ್ದಾರೆ.
ಜಿಲ್ಲೆಯಲ್ಲಿ ಇಂದಿನವರೆಗೂ ಮತ್ತೆ ಯಾವುದೇ ಸ್ವರೂಪದ ಕೊವಿಡ್ ಪ್ರಕರಣಗಳು ವರದಿಯಾಗಿಲ್ಲ. ಸಾರ್ವಜನಿಕರು ಕೊವಿಡ್ ಬಗ್ಗೆ ಗಾಬರಿ ಪಡದೇ ಆರೋಗ್ಯ ಸುರಕ್ಷತೆಗಾಗಿ ಸೂಕ್ತ ಮುನ್ನೆಚ್ಚರಿಕೆ, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.
ಕೊವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಕೊವಿಡ್-19 ರ ಅಂಕಿ-ಅಂಶಗಳು, ಕೇರಳದಲ್ಲಿನ ಕೊವಿಡ್-19 ಪ್ರಕರಣಗಳ ಹೆಚ್ಚಳ, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೊವಿಡ್-19 ರ ಉಪತಳಿ ಜೆಎನ್.1 (JN.1) ವರದಿ, ಚಳಿಗಾಲದ ಹವಾಮಾನ, ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ ಸಂಭವನೀಯ ಜನದಟ್ಟಣೆಯನ್ನು ಗಮನದಲ್ಲಿರಿಸಿಕೊಂಡು ಕೆಲವು ಸಲಹಾತ್ಮಕ ಮಾರ್ಗಸೂಚಿಗಳನ್ನು ಶಿಫಾರಸ್ಸು ಮಾಡಿದೆ. ಈ ಅಂಶಗಳನ್ನು ಜಿಲ್ಲೆಯ ಸಾರ್ವಜನಿಕರು ಸಹ ಪಾಲಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದ್ದಾರೆ.ಕೊವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಕೊವಿಡ್-19 ರ ಅಂಕಿ-ಅಂಶಗಳು, ಕೇರಳದಲ್ಲಿನ ಕೊವಿಡ್-19 ಪ್ರಕರಣಗಳ ಹೆಚ್ಚಳ, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೊವಿಡ್-19 ರ ಉಪತಳಿ ಜೆಎನ್.1 (JN.1) ವರದಿ, ಚಳಿಗಾಲದ ಹವಾಮಾನ, ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ ಸಂಭವನೀಯ ಜನದಟ್ಟಣೆಯನ್ನು ಗಮನದಲ್ಲಿರಿಸಿಕೊಂಡು ಕೆಲವು ಸಲಹಾತ್ಮಕ ಮಾರ್ಗಸೂಚಿಗಳನ್ನು ಶಿಫಾರಸ್ಸು ಮಾಡಿದೆ. ಈ ಅಂಶಗಳನ್ನು ಜಿಲ್ಲೆಯ ಸಾರ್ವಜನಿಕರು ಸಹ ಪಾಲಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದ್ದಾರೆ.
60 ವರ್ಷ ಹಾಗೂ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು, ವಿಶೇಷವಾಗಿ ಕಿಡ್ನಿ, ಹೃದಯ, ಲೀವರ್ ಮತ್ತು ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು ಜನದಟ್ಟಣೆ, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಸಾಧ್ಯವಾದಷ್ಟು ತೆರಳದಂತೆ ತಿಳಿಸಿದ್ದಾರೆ.