ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ನೌಕರರ ಸಹಕಾರಿ ಪತ್ತಿನ ಸಂಘ ನಿಯಮಿತದ ಚುನಾವಣೆಯಲ್ಲಿ ಸೋತಿದ್ದನ್ನೇ ಮನಸ್ಸಿಗೆ ಹಚ್ಚಿಕೊಂಡ ನೌಕರನೋರ್ವ, ಧಾರವಾಡದ ರೇಣುಕಾನಗರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಂದ್ರಕಾಂತ ಸಾವಳಗಿ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆಯಷ್ಟೇ ನಡೆದಿದ್ದ ಚುನಾವಣೆಯಲ್ಲಿ ಚಂದ್ರಕಾಂತ ಸೋತಿದ್ದರು.
ಅದೇ ವಿಷಯಕ್ಕೆ ಸಾಕಷ್ಟು ಮನನೊಂದಿದ್ದ ಚಂದ್ರಕಾಂತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಇನ್ನೂ ಕುಟುಂಬಸ್ಥರ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಚಂದ್ರಕಾತ ಮೃತದೇಹವನ್ನು ಕೇಲಗೆ ಇಳಿಸಿರೋ ಪೊಲೀಸರು, ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.