ಬೆಂಗಳೂರು:- ಶಕ್ತಿ ಯೋಜನೆ ಪರಿಷ್ಕರಣೆ ಮಾಡಲಾಗುತ್ತದೆ ಎಂಬ DCM ಡಿಕೆ ಶಿವಕುಮಾರ್ ಹೇಳಿಕೆಗೆ ಮಾಜಿ ಸಿಎಂ HD ಕುಮಾರಸ್ವಾಮಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
Naraka Chaturdashi: ಇಂದು “ನರಕ ಚತುರ್ದಶಿ”: ನೀವು ತಪ್ಪದೇ ಈ ಕೆಲಸಗಳನ್ನು ಮಾಡಲೇಬೇಕು.!
ಡಿಸಿಎಂಗೆ ಕನಸಿನಲ್ಲಿ ಬಂದು ಮಹಿಳೆಯರು ಹೇಳಿದ್ದಾರೋ? ಅಥವಾ ದೇವರು ಬಂದು ಜ್ಞಾನೋದಯ ಮಾಡಿದ್ದಾನೆಯೇ? ಒಂದೊಂದೇ ಗ್ಯಾರಂಟಿ ಯೋಜನೆಗಳನ್ನು ಮರೆಯಾಗಿಸಲು ಇದೊಂದು ಕಾರಣ ಅಷ್ಟೆ ಎಂದಿದ್ದಾರೆ.
ಟ್ವೀಟ್ ಮೂಲಕ ಮಹಿಳೆಯರು ತಿಳಿಸಿದ್ದಾರೆಂದು ಹೇಳುತ್ತಾರೆ. ಇವರಿಗೆ ಈಗ ಜ್ಞಾನೋದಯ ಆಗಿದೆಯಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಶಕ್ತಿ ಯೋಜನೆ ಮೂಲಕ ಅವರನ್ನು ಬಲಾಢ್ಯರನ್ನಾಗಿ ಮಾಡಿದ್ದೀರಾ? ಸರ್ಕಾರಕ್ಕೆ ಈ ಯೋಜನೆಯನ್ನು ದೀರ್ಘಾವಧಿಗೆ ಮಾಡಲು ಸಾಧ್ಯ ಆಗುತ್ತಿಲ್ಲ. ಒಂದೊಂದಾಗಿ ಗ್ಯಾರಂಟಿಗಳನ್ನು ರದ್ದುಗೊಳಿಸಲು ಮೊದಲ ಹಂತಂದ ಪ್ರಕ್ರಿಯೆ ಇದು. ಇದು ಗ್ಯಾರಂಟಿ ನಿಲ್ಲಿಸಲು ಒಂದು ಪೀಠಿಕೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಈವರೆಗೆ ಗ್ಯಾರಂಟಿ ಯೋಜನೆಗಳನ್ನೇ ಪ್ರಮುಖವಾಗಿ ಹೇಳುತ್ತಿದ್ದರು. ನುಡಿದಂತೆ ನಡೆದಿದ್ದೇವೆ ಎಂದು ಜನರ ಬ್ರೈನ್ ವಾಷ್ ಮಾಡುತ್ತಿದ್ದರು. ಇದರಿಂದ ಅಭಿವೃದ್ಧಿ ಕೆಲಸ ನಿಲ್ಲಿಸಿದ್ದರು, ಎಲ್ಲಾ ಸ್ಥಗಿತಗೊಳಿಸಿದ್ದರು. ತೆರಿಗೆಯವರಿಗೆ 10 ಸಾವಿರ ಕೋಟಿ ಹೆಚ್ಚಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ಇದು ಯಾವ ಪುರುಷಾರ್ಥಕ್ಕೆ? ಗ್ಯಾರಂಟಿ ಹೆಸರು ಹೇಳಿಕೊಂಡು ಜನರಿಗೆ ಹೊರೆ ಮಾಡಿ, ಜನರ ಹಣ ಕಿತ್ತು ಕಾರ್ಯಕ್ರಮ ಮುಂದುವರಿಸುವುದರಲ್ಲಿ ಅರ್ಥ ಇಲ್ಲ. ಇದರಿಂದ ಕ್ಯಾಪಿಟಲ್ ಅಸೆಟ್ ಆಗುತ್ತಿಲ್ಲ, ಕೇವಲ ಖರ್ಚಾಗುತ್ತಿದೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ನಾನು ಗ್ಯಾರಂಟಿ ಕೊಡುವುದನ್ನು ವಿರೋಧಿಸುತ್ತಿಲ್ಲ. ಗ್ಯಾರಂಟಿ ಕೊಡಿ, ಆದರೆ ಗ್ಯಾರಂಟಿ ಹೆಸರಲ್ಲಿ ಆರ್ಥಿಕ ಪರಿಸ್ಥಿತಿ ಹಾಳು ಮಾಡಬೇಡಿ. ಮುಂದಿನ ಅಧಿಕಾರ ನಡೆಸುವ ಪೀಳಿಗೆ ಭವಿಷ್ಯ ಹಾಳು ಮಾಡಬೇಡಿ ಎಂದು ಅವರು ಹೇಳಿದ್ದಾರೆ.