ಶಿವಮೊಗ್ಗ:- ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಲು ನಿಮ್ಮಪ್ಪನ ಮನೆಯಿಂದ ದುಡ್ಡು ತಂದಿದ್ಯಾ!? ಎಂದು ಹೇಳುವ ಮೂಲಕ ಶಿಕ್ಷಣ ಸಚಿವರಿಗೆ ನಿಂದಿಸಿದ ಆರೋಪಿ ವಿರುದ್ಧ ಕೇಸ್ ದಾಖಲಾಗಿದೆ.
ವಿಪಕ್ಷದವರು ದೇಶದ ನಾಗರಿಕರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ: PM ಮೋದಿ!
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದ ವ್ಯಕ್ತಿಯ ವಿರುದ್ಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಸುಮೊಟೋ ಕೇಸ್ ದಾಖಲಾಗಿದೆ.
ಮೋಹಿತ್ ನರಸಿಂಹಮೂರ್ತಿ ಎಂಬಾತನ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಮೋಹಿತ್ ತನ್ನ ಎಕ್ಸ್ ಮತ್ತು ಇನ್ಸ್ಟಾಗ್ರಾಂ ಖಾತೆಯಲ್ಲಿ ಸಚಿವರ ವಿರುದ್ಧ ವಿಡಿಯೋ ಪ್ರಕಟಿಸಿದ್ದ. ಅದರಲ್ಲಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಲು ಹಣವೇನು ನಿಮ್ಮಪ್ಪನ ಮನೆಯಿಂದ ತಂದಿದ್ದೀರಾ? ಸಾರ್ವಜನಿಕರ ಹಣ ಲೂಟಿ ಮಾಡಿ ನೀವು ಮತ್ತು ಕುಟುಂಬ ಐಶಾರಾಮಿ ಜೀವನ ನಡೆಸುತ್ತಿದ್ದೀರಾ ಎಂದು ಹೇಳಿಕೊಂಡಿದ್ದ.
ಸದ್ಯ ಆತನ ವಿರುದ್ಧ ಪೊಲೀಸರು ಪ್ರ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.