ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗ್ತಿದ್ದೀರಾ!? ಹಾಗಿದ್ರೆ ಈ ಸುದ್ದಿ ಗಮನದಲ್ಲಿಟ್ಟುಕೊಂಡು ನೋಡಿ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುವ ಭಕ್ತರಿಗೆ ಕುಮಾರಧಾರ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಆ ಮೂಲಕ ತೀರ್ಥಸ್ನಾನಕ್ಕೂ ಚಂಡಮಾರುತದ ಎಫೆಕ್ಟ್ ತಟ್ಟಿದೆ.
ವಾಟ್ಸಾಪ್ ನಲ್ಲಿ ಬಂದ ನೋಟಿಸ್ ನಾನು ನಂಬಲ್ಲ: ಬಿಜೆಪಿ ಶಾಸಕ ಯತ್ನಾಳ್!
ಜಿಲ್ಲೆ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಾಕಷ್ಟು ಪ್ರವಾಸಿಗಳು ಭೇಟಿ ನೀಡುತ್ತಿದ್ದಾರೆ. ಚಂಡಮಾರುತದ ಹಿನ್ನೆಲೆಯಲ್ಲಿ ಅಲರ್ಟ್ ಆಗಿದ್ದು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಪ್ರವಾಸಿಗರು ಕುಮಾರಧಾರಾ ನದಿಗೆ ಇಳಿಯಬಾರದು ಎಂದು ಪುತ್ತೂರು ಉಪ ಆಯುಕ್ತ ಜುಬಿನ್ ಮೊಹಪಾತ್ರ ಸೂಚಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲಾಡಳಿತ ಸೇರಿದಂತೆ ವಿವಿಧ ಅಕಾಡೆಮಿಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ಫೆಂಗಲ್ ಚಂಡಮಾರುತದಿಂದ ಮಳೆ ಹಿನ್ನೆಲೆ ಕಾರ್ಯಕ್ರಮ ಮುಂದೂಡಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.
ಫೆಂಗಲ್ ಚಂಡಮಾರುತದಿಂದಾಗಿ ಮಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿದ್ದು, ನಗರದ ತಗ್ಗುಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ. ಚರಂಡಿಗಳು ಬ್ಲಾಕ್ ಆಗಿ ನಗರದ ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ಕೊಟ್ಟಾರ ಚೌಕಿಯಲ್ಲಿ ಕೃತಕ ನೆರೆ ಸೃಷ್ಟಿಯಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸುರತ್ಕಲ್, ಮುಲ್ಕಿ, ಉಡುಪಿ ಕಡೆ ಹೋಗುವ ಮತ್ತು ಮಂಗಳೂರಿಗೆ ಬರುವ ಪ್ರಯಾಣಿಕರು ಪರದಾಡುವಂತಾಗಿದೆ.