ಸ್ಯಾಂಡಲ್ ವುಡ್ ನಟ ದಿಗಂತ್ ಹಾಗೂ ಐಂದ್ರಿತಾ ರೇ ದಂಪತಿ ಸುತ್ತೂರು ಮಠಕ್ಕೆ ಎಲೆಕ್ಟ್ರಿಕಲ್ ಆನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ.
ಸುತ್ತೂರು ಮಠಕ್ಕೆ ಭೇಟಿ ನೀಡಿ ಎಲೆಕ್ಟ್ರಿಕಲ್ ಆನೆಯನ್ನು ದೇಣಿಗೆ ನೀಡಿದ್ದು, ದಿಗಂತ್ ದಂಪತಿಯ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ದಿಗಂತ್ ದಂಪತಿಯ ಕಾರ್ಯಕ್ಕೆ ಬಿಗ್ ಬಾಸ್ ಬೆಡಗಿ ಸಂಗೀತಾ ಶೃಂಗೇರಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ನಟ ದಿಗಂತ್ ಕನ್ನಡದ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟಿ ಐಂದ್ರಿತಾ ರೇ ಕನ್ನಡದ ಜೊತೆ ಪರಭಾಷೆಯ ಸಿನಿಮಾಗಳಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ಕೇರಳದ ದೇವಸ್ಥಾನವೊಂದಕ್ಕೆ ಕನ್ನಡತಿ ಪ್ರಿಯಾಮಣಿ ಎಲೆಕ್ಟ್ರಿಕಲ್ ಆನೆಯೊಂದನ್ನು ದೇಣಿಗೆ ನೀಡಿದ್ದರು.