ಮಂಡ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಪಿ ರವಿಕುಮಾರ್ ಅವರು ಇಂದು ಮಂಡ್ಯ ತಾಲ್ಲೂಕು ಕಚೇರಿಯಲ್ಲಿ ರೆಕಾರ್ಡ್ ರೂಮ್, ಸರ್ವೆ ದಾಖಲೆಗಳ ಡಿಜಿಟಲೀಕರಣ ಭೂ ಸುರಕ್ಷಾ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಚಾಲನೆ ನೀಡಿ ಮಾತನಾಡಿದ ಅವರು ರೈತರು ತಮ್ಮ ಭೂಮಿ ದಾಖಲೆಗಳನ್ನು ಕಳೆದುಕೊಂಡು ಮತ್ತೆ ಪಡೆಯಲು ತಹಶೀಲ್ದಾರ್ ಕಚೇರಿ ತಿಂಗಳುಗಟ್ಟಲೆ ತಿರುಗಿದರು ದಾಖಲಾತಿ ದೊರೆಯುತ್ತಿರಲಿಲ್ಲ,
40-50 ವರ್ಷದ ಹಳೆಯ ಭೂ ದಾಖಲೆಗಳ ಪತ್ರದ ಕಾಗದ ಹಳೆಯದಾಗಿ ಹರಿದುಹೋಗಿ ತನ್ನ ಅಸ್ತಿತ್ವವ ಕಳೆದುಕೊಳ್ಳುತ್ತಿತ್ತು, ಇದನ್ನು ಚಿಂತಿಸಿ ದಾಖಲೆಗಳನ್ನು ಡಿಜಿಟಲೀಕರಣ ಮಾಡುವುದರಿಂದ ರೈತರು ಹಾಗೂ ಸಾರ್ವಜನಿಕರಿಗೆ ಅವರಿಗೆ ಬೇಕಾದ ಸಮಯದಲ್ಲಿ ದಾಖಲೆಗಳ ಪ್ರಿಂಟ್ ಗಳನ್ನು ನೀಡಬಹುದು ಎಂದರು.
KPSC Recruitment: ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: ತಿಂಗಳಿಗೆ ₹ 48,000 ಸಂಬಳ – ಇಂದೇ ಅರ್ಜಿ ಸಲ್ಲಿಸಿ
ರೈತರಿಗೆ ಸಮಸ್ಯೆಗಳನ್ನು ಪರಿಹರಿಸಲು ಕಂದಾಯ ಇಲಾಖೆಯಲ್ಲಿ ಡಿಜಿಟಲೀಕರಣ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ, ಇಲ್ಲಿಯ ತನಕ ಕಂದಾಯ ಇಲಾಖೆಯಲ್ಲಿ ನೋಂದಣಿ ಆಗಿರುವ ಎಲ್ಲಾ ಭೂಮಿ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಕ್ಲೌಡ್ ನಲ್ಲಿ ಸಂಸ್ಕರಿಸಲಾಗುವ ಯೋಜನೆ ಇದಾಗಿದೆ ಎಂದರು.
ಭೂಸುರಕ್ಷಾ ಎಂಬ ಅಪ್ಲಿಕೇಶನ್ ನಲ್ಲಿ ನಿಮ್ಮ ಭೂ ದಾಖಲೆಯ ಸಂಖ್ಯೆಯನ್ನು ನೀಡಿದರೆ ಸಾಕು ಒಂದು ನಿಮಿಷದಲ್ಲಿ ನಿಮ್ಮ ಭೂ ದಾಖಲಾತಿ ಪತ್ರಗಳನ್ನು ನೀಡುವ ಕ್ರಾಂತಿಕಾರಿ ಯೋಜನೆಯನ್ನು ಸರ್ಕಾರ ಮಾಡಿದೆ ಇಂದು ಡಿಜಿಟಲೀಕರಣ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿರುವುದು ಸಂತಸದ ವಿಷಯ ಎಂದು ಹರ್ಷ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ್, ಉಪವಿಭಾಗಾಧಿಕಾರಿ ಶಿವಮೂರ್ತಿ, ಮಂಡ್ಯ ತಹಶೀಲ್ದಾರ್ ಡಾ ಶಿವಕುಮಾರ ಬಿರಾದರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.