ಮಂಡ್ಯ: ಸೆಲ್ಫಿ ತೆಗೆದುಕೊಳ್ಳಲು ಹೋದ ಬೆಂಬಲಿಗರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ಬೆಂಬಲಿಗನ ಮೊಬೈಲ್ ಕಸಿದುಕೊಂಡು ಶಿವಕುಮಾರ್ ಸಿಡಿಮಿಡಿಗೊಂಡಿದ್ದಾರೆ. ಈ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ಶಿವಪುರ ಸತ್ಯಾಗ್ರಹ ಸೌಧ ಬಳಿ ನಡೆದಿದೆ. 137ನೇ ಕಾಂಗ್ರೆಸ್ ಸಂಸ್ಥಾಪನ ದಿನಾಚರಣೆ ಹಿನ್ನೆಲೆ ಡಿಕೆಶಿ ಧ್ವಜಾರೋಹಣ ಮಾಡಲು ಹೋಗಿದ್ದರು. ಈ ವೇಳೆ ಅಭಿಮಾನಿ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದಾರೆ. ಆಗ ಧ್ವಜಾರೋಹಣ ಮಾಡಲು ಬದಲು ಸೆಲ್ಫಿ ತೆಗೆದುಕೊಳ್ಳಲಾ ಅಂತ ಗರಂ ಆಗಿದ್ದಾರೆ.
ಕಾಂಗ್ರೆಸ್ ಪಕ್ಷದ 137ನೇ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಶಿವಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸತ್ಯಾಗ್ರಹ ಸೌಧ ಬಳಿ ಕಾಂಗ್ರೆಸ್ ಧ್ವಜಾರೋಹಣ ಮಾಡಿದರು. ಮದ್ದೂರಿಗೆ ಆಗಮಿಸಿದ ಡಿಕೆಶಿಗೆ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಡಿಕೆಶಿಗೆ ಮಾಜಿ ಉಪಮುಖ್ಯಮಂತ್ರಿ ಜಿ ಪರಮೇಶ್ವರ್, ಮಾಜಿ ಸಚಿವ ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ಧೃವ ನಾರಾಯಣ್, ಸಲೀಮ್ ಅಹಮ್ಮದ್ ಸೇರಿದಂತೆ ಹಲವರು ಸಾಥ್ ನೀಡಿದರು.
