ಲಕ್ನೋ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಹಾಗೂ ಪುತ್ರಿಗೆ ಕೊರೊನಾ ವೈರಸ್ ದೃಢಪಟ್ಟಿದೆ.ಬುಧವಾರ ನಡೆಸಿದ ಕೋವಿಡ್-19 ಪರೀಕ್ಷೆಯಲ್ಲಿ ಅಖಿಲೇಶ್ ಯಾದವ್ ಅವರಿಗೆ ನೆಗೆಟಿವ್ ವರದಿ ಬಂದಿದೆ. ಅವರ ಪತ್ನಿ, ಮಾಜಿ ಸಂಸದೆ ಡಿಂಪಲ್ ಯಾದವ್ ಮತ್ತು ಮಗಳಿಗೆ ಕೊರೊನಾ ದೃಢಪಟ್ಟಿದೆ.
ಈ ಕುರಿತಂತೆ ಡಿಂಪಲ್ ಯಾದವ್ ತಮ್ಮ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ. ನನಗೆ ಕೋವಿಡ್-19 ದೃಢಪಟ್ಟಿದೆ. ನಾನು ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದುಕೊಂಡಿದ್ದೇನೆ. ನನಗೆ ಯಾವುದೇ ರೋಗಲಕ್ಷಣಗಳು ಕಂಡುಬಂದಿಲ್ಲ. ಇದೀಗ ನಾನು ಕ್ವಾರಂಟೈನ್‍ನಲ್ಲಿದ್ದು, ಇತ್ತೀಚೆಗಷ್ಟೇ ನನ್ನನ್ನು ಭೇಟಿಯಾದ ಎಲ್ಲರೂ ಶೀಘ್ರದಲ್ಲಿಯೇ ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ವಿನಂತಿಸಿದ್ದಾರೆ.
