ಬೆಂಗಳೂರು:- ಸಚಿವ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂಬ ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ಧ ದಿನೇಶ್ ಪತ್ನಿ ಟಬು ರಾವ್ ದೂರು ನೀಡಿದ್ದಾರೆ.
ಹ್ಯಾಟ್ರಿಕ್ ಸೋಲಿನ ಬಳಿಕ ಮುಂಬೈಗೆ ಮೊದಲ ಗೆಲುವು! – ಡೆಲ್ಲಿಗೆ ಮತ್ತೆ ಮುಖಭಂಗ !
ಸಂಜಯನಗರ ಪೊಲೀಸ್ ಠಾಣೆಗೆ ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ದೂರು ನೀಡಿದ್ದಾರೆ. ಇದಕ್ಕೂ ಮುಂಚೆ ಟಬು ರಾವ್ ಅವರು ಶಾಸಕ ಯತ್ನಾಳ್ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಬಿಜೆಪಿ ನಾಯಕರಿಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಮನವಿ ಮಾಡಿಕೊಂಡಿದ್ದರು. ಅದರ ಬೆನ್ನಲ್ಲೇ ದೂರು ನೀಡಿದ್ದಾರೆ.
ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಟಬು ರಾವ್, ಬಸನಗೌಡ ಪಾಟೀಲ್ ಯತ್ನಾಳ್ ಯಾರು ನನಗೆ ಗೊತ್ತಿಲ್ಲ. ನಾನು ರಾಜಕೀಯದಲ್ಲಿಲ್ಲ, ನನಗೇಕೆ ಹೀಗೆ ಹೇಳಿದ್ದಾರೆ ಗೊತ್ತಿಲ್ಲ. ಈ ರೀತಿ ಮಾತನಾಡೋದೆ ರಾಜಕೀಯನಾ ಎಂದು ಪ್ರಶ್ನೆ ಮಾಡಿದ್ದಾರೆ.
ಭಾರತ ಮಾತೆ ಅಂತಾರೆ, ಇದೇನಾ ಇವರು ಕೊಡುವ ಗೌರವ? ಸಂಜಯನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದೇವೆ. ನಾನು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ. ದಿನೇಶ್ ಬಗ್ಗೆ ಮಾತನಾಡಿದರೆ ಪರ್ವಾಗಿಲ್ಲ, ನಮ್ಮ ಬಗ್ಗೆ ಏಕೆ ಎಂದು ವಾಗ್ದಾಳಿ ಮಾಡಿದ್ದಾರೆ.