ಬೆಂಗಳೂರು: ಬೆಂಗಳೂರಿನಲ್ಲಿರುವ ಸರ್ಕಾರಿ ನಿವಾಸದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಸಿಎಂ ಸಿದ್ದರಾಮಯ್ಯ ಮತ್ತು ಗೃಹಸಚಿವರು ಸೇರಿ ಪ್ರಮುಖರಿಗೆ ಔತಣಕೂಟ ಏರ್ಪಡಿಸಿದ್ದರು. ಕೆಪಿಸಿಸಿ ಅಧ್ಯಕ್ಷರ ಸ್ಥಾನದ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಚರ್ಚೆ ನಡುವೆಯೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಸಭೆ ನಡೆದಿರುವುದು ಕುತೂಹಲ ಮೂಡಿಸಿದೆ.
ಬ್ಯಾಟರಿ ತೆಗೆಯಲು ಸಾಧ್ಯವಿಲ್ಲದ ಮೊಬೈಲ್ ಹ್ಯಾಂಗ್- ಸ್ಲೋ ಆಗ್ತಿದ್ಯಾ..? ಹಾಗಿದ್ರೆ ಈ ಟಿಪ್ಸ್ ಪಾಲಿಸಿ
ಹೌದು ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಗೃಹ ಸಚಿವ ಪರಮೇಶ್ವರ್, ಸಚಿವ ಹೆಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ ಪಾಲ್ಗೊಂಡಿದ್ದರು. ಬಜೆಟ್ಗೂ ಮುನ್ನವೇ ಸಂಪುಟ ಪುನಾರಚನೆ ಗುಸುಗುಸು ಕೇಳಿಬಂದಿದೆ. ಈ ಬೆನ್ನಲ್ಲೇ ಎರಡು ವಿಚಾರಗಳ ಬಗ್ಗೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ. ಮುಂದಿನ ರಾಜಕೀಯ ಬದಲಾವಣೆಗಳ ಬಗ್ಗೆ ಡಿನ್ನರ್ ಪಾಲಿಟಿಕ್ಸ್ನಲ್ಲಿ ಭರ್ಜರಿ ಚರ್ಚೆ ನಡೆದಿದೆ ಎನ್ನಲಾಗಿದೆ.
ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ಪವರ್ ಶೇರಿಂಗ್ ವಿಚಾರ, ಈ ಮೂರು ವಿಚಾರಗಳ ಬಗ್ಗೆ ಆಪ್ತ ಸಚಿವರ ಜೊತೆ ಸಿಎಂ ಕ್ಲೋಸ್ ಡೋರ್ ಮೀಟಿಂಗ್ ನಡೆಸಿದ್ದಾರೆನ್ನಲಾಗಿದೆ. ಸಚಿವ ಸಂಪುಟ ಪುನಾರಚನೆ ಆಗಬೇಕಾ ಬೇಡ್ವಾ? ವೈಯಕ್ತಿಕವಾಗಿ ಸಂಪುಟ ಪುನಾರಚನೆ ಇಷ್ಟವಿಲ್ಲದಿದ್ದರೂ ಹೈಕಮಾಂಡ್ ಸೂಚನೆ ನೀಡಿದರೆ ಏನು ಎಂಬ ಬಗ್ಗೆ ಸಿಎಂ ಚರ್ಚೆ ನಡೆಸಿದ್ದಾರೆ. ಸಂಪುಟ ಪುನಾರಚನೆ ಅನಿವಾರ್ಯ ಆದರೆ ಹೇಗಿರಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆದಿರುವ ಸಾಧ್ಯತೆ ಇದೆ.