ಬೆಂಗಳೂರು:- ಜನಾದೇಶದ ಮೂಲಕ 5 ವರ್ಷಗಳ ಅವಧಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನಲ್ಲಿ ಮೊದಲಿನಿಂದಲೂ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದೆ.
ಸಿದ್ದರಾಮಯ್ಯನವರೇ ನಿಮ್ಮ ಖೊಟ್ಟಿ ಗ್ಯಾರಂಟಿ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ: HD ಕುಮಾರಸ್ವಾಮಿ!
ಇನ್ನೂ 135 ಸೀಟ್ಗಳನ್ನು ಗೆದ್ದು ಅಧಿಕಾರಕ್ಕೇರಿರೋ ಕಾಂಗ್ರೆಸ್ನಲ್ಲಿ ಡಿನ್ನರ್ ಪಾಲಿಟಿಕ್ಸ್ ಮತ್ತಷ್ಟು ತಾರಕಕ್ಕೇರಿದೆ. ಕಳೆದ ವಾರ ಸಚಿವ ಸತೀಶ್ ಜಾರಕಿಹೊಳಿ ಬೆಂಗಳೂರು ನಿವಾಸದಲ್ಲಿ ನಡೆದಿದ್ದ ಡಿನ್ನರ್ ಪಾರ್ಟಿಯ ಚರ್ಚೆ ಮತ್ತೊಂದು ಹಂತಕ್ಕೆ ತಲುಪಿದೆ. ವಿದೇಶದಿಂದ ದೆಹಲಿಗೆ ಬಂದಿಳಿದ ಡಿಸಿಎಂ ಡಿಕೆ ಶಿವಕುಮಾರ್, ಹೈಕಮಾಂಡ್ ಬಳಿ ಅಸಮಾಧಾನ ತೋಡಿಕೊಂಡಿದ್ದಾರೆ. ಸಚಿವ ಪರಮೇಶ್ವರ್ ಕರೆದಿದ್ದ ಮತ್ತೊಂದು ಡಿನ್ನರ್ ಮೀಟಿಂಗ್ ರದ್ದಾಗಿದೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಡಿನ್ನರ್ ಪಾಲಿಟಿಕ್ಸ್ ಸಂಚಲನಕ್ಕೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿದೇಶ ಪ್ರವಾಸದಲ್ಲಿರುವಾಗಲೇ ಇತ್ತ ಸಿಎಂ ಸಿದ್ದರಾಮಯ್ಯ ಸೇರದಿಂತೆ ಇತರೆ ಸಚಿವರು ಡಿನ್ನರ್ ಸಭೆ ಮಾಡಿದ್ದು, ಡಿಕೆಶಿ ಅಸಮಾಧಾನಕ್ಕೆ ಕಾರಣವಾಗಿದೆ. ಅಲ್ಲದೇ ವಿದೇಶದಿಂದ ವಾಪಸ್ ಬಂದ ಬಳಿಕ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಎಚ್ಚೆತ್ತ ಹೈಕಮಾಂಡ್, ಗೃಹ ಪರಮೇಶ್ವರ್ ಅವರ ಕರೆದಿದ್ದ ಡಿನ್ನರ್ ಸಭೆಯನ್ನು ರದ್ದುಗೊಳಿಸುವಂತೆ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ನಾಳಿನ ಪರಮೇಶ್ವರ್ ಅವರ ಮತ್ತೊಂದು ಡಿನ್ನರ್ ಸಭೆ ರದ್ದಾಗಿದೆ