ಬೆಂಗಳೂರು: ಯಾವುದೇ ಶಾಸಕರು ಬಹಿರಂಗವಾಗಿ ಹೇಳಿಕೆ ನೀಡಿದ್ರೆ ಶಿಸ್ತು ಕ್ರಮ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗವಿಯಪ್ಪ ಹಾಗೆ ಹೇಳಿದ್ದಾರೆ ಅಂತ ನಾನು ಅಂದುಕೊಳ್ಳಲ್ಲ. ನಮ್ಮ ಪಕ್ಷ ಈಗಾಗಲೇ ಬಜೆಟ್ ಘೋಷಣೆ ಮಾಡಿದೆ. ಅದರ ಅಡಿಯಲ್ಲಿ ಅನುದಾನ ಹಂಚಿಕೆ ಆಗುತ್ತದೆ. ಗ್ಯಾರಂಟಿ ನಿಲ್ಲಿಸುವಂತೆ ಹೇಳಿದ್ದಾರೆ ಎಂದು ನಾನು ಒಪ್ಪಲ್ಲ.
ರೈತರಿಗೆ ಭರ್ಜರಿ ಗುಡ್ ನ್ಯೂಸ್: ಕುರಿ ಸಾಕಾಣಿಕೆ ಮಾಡುವವರಿಗೆ 1.75 ಲಕ್ಷ ಸಬ್ಸಿಡಿ ನೀಡಲಿದೆ ಸರ್ಕಾರ!
ಎಲ್ಲಾ ಶಾಸಕರಿಗೂ ಅನುದಾನವನ್ನ ನೀಡಿದ್ದೇವೆ. ಗವಿಯಪ್ಪಗೆ ಸರಿಯಾದ ಮಾಹಿತಿ ಇಲ್ಲ ಅನ್ಸುತ್ತೆ. ಅಭಿವೃದ್ಧಿಗೆ ಅನುದಾನ ನೀಡುತ್ತಿದ್ದೇವೆ. ಗವಿಯಪ್ಪ ಜೊತೆಗೆ ನಾನು ಮಾತನ್ನಾಡುತ್ತೇನೆ. ಅವರಿಂದ ಸ್ಪಷ್ಟನೆ ಕೇಳುತ್ತೇನೆ. ಬೇರೆ ಯಾವುದೇ ಶಾಸಕರು ಬಹಿರಂಗವಾಗಿ ಹೇಳಿಕೆ ನೀಡಿದ್ರೆ ಶಿಸ್ತು ಕ್ರಮ ಎಂದು ಎಚ್ಚರಿಕೆ ಸಂದೇಶ ರವಾನಿಸಿದರು.