ಮಂಡ್ಯ:- ಜನಮನದಿಂದ ಮಾಸುವ ಮುನ್ನವೇ ಇದೀಗ ಮತ್ತೊಂದು ಭ್ರೂಣಲಿಂಗ ಪತ್ತೆ, ಹತ್ಯೆ ಜಾಲ ಮಂಡ್ಯದಲ್ಲೇ ಪತ್ತೆಯಾಗಿದೆ.
ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುತ್ತಿದ್ದೀರಾ..!?.. ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ..!
ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಮೋಹನ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಅರವಿಂದ್ ಮತ್ತು ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಗರ್ಭಪಾತಕ್ಕೆ ಬಂದಿದ್ದ ಮೈಸೂರು ಮೂಲದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ದಾಳಿ ವೇಳೆ ಗರ್ಭಪಾತ ಮಾಡುವ ಯಂತ್ರೋಪಕರಣಗಳು ಜಪ್ತಿ ಮಾಡಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಪಾಂಡವಪುರ ತಾಲೂಕು ಆಸ್ಪತ್ರೆ ಆ್ಯಂಬುಲೆನ್ಸ್ ಚಾಲಕ ಆನಂದ್, ತಾಲೂಕು ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಡಿ ಗ್ರೂಪ್ ಸಿಬ್ಬಂದಿ ಅಶ್ವಿನಿ ಹಾಗೂ ಮತ್ತೊಬ್ಬ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಾಲಕ ಆನಂದ್ಗೆ ನೀಡಲಾಗಿದ್ದ ಸರ್ಕಾರಿ ನಿವಾಸದಲ್ಲೇ ಕೃತ್ಯ ಎಸಗಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ತಡರಾತ್ರಿ ದಾಳಿ ಮಾಡಿದ್ದಾರೆ. ಈ ದಂಧೆಯಲ್ಲಿ ಕೆಲವು ವೈದ್ಯಾಧಿಕಾರಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಕಳೆದ ವರ್ಷ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಮಂಡ್ಯದಲ್ಲಿ ಆಲೆಮನೆಯಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಕರಾಳ ದಂಧೆ ಬಯಲಾಗಿತ್ತು.