ಬೆಂಗಳೂರು:- ತುಳುಗೆ ಕರ್ನಾಟಕದಲ್ಲಿ ಹೆಚ್ಚುವರಿ ಭಾಷೆ ಸ್ಥಾನಮಾನಕ್ಕೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂಬ ಕೋರಿಕೆ ಇದ್ದು, ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುವುದಾಗಿ ಹೇಳಿದರು.
ಇನ್ನೂ ಕಂಬಳ ಕರಾವಳಿ ಭಾಗದ ಜನಪ್ರಿಯ ಕ್ರೀಡೆ. ಮಂಗಳೂರು, ಉಡುಪಿ ಜಿಲ್ಲೆಗಳ ಜಾನಪದ ಕ್ರೀಡೆ. ಅಶೋಕ್ ರೈ ಅವರ ನೇತೃತ್ವದಲ್ಲಿ ಕರಾವಳಿ ಪ್ರದೇಶದ ಜಾನಪದ ಕ್ರೀಡೆಯನ್ನು ಬೆಂಗಳೂರು ನಗರಕ್ಕೆ ಪರಿಚಯಿಸುವುದು ನಿಜಕ್ಕೂ ಶ್ಲಾಘನೀಯ ಎಂದರು.