ಬೆಂಗಳೂರು: ಕೆಆರ್ಎಸ್ ಡ್ಯಾಮ್ನಿಂದ ತಮಿಳುನಾಡಿಗೆ ನೀರು ಹರಿಸುವ ವಿಚಾರವಾಗಿ ಮಾತನಾಡಿದ ಬಿಜೆಪಿ ಎಂಎಲ್ಸಿ ರವಿಕುಮಾರ್, ರಾಜ್ಯದ ಸಂಕಷ್ಟ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಬರ ಪರಿಹಾರ ಘೋಷಣೆ ಮಾಡಲಿ. ಎಕರೆಗೆ ತಲಾ 25 ಸಾವಿರ ರೂ. ಬೆಳೆ ಪರಿಹಾರ ಕೊಡಲಿ. ಕಾವೇರಿ, ಬರ ವಿಚಾರ ಡೈವರ್ಟ್ ಮಾಡಲು ಮೂವರು ಡಿಸಿಎಂ ನೇಮಕದ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಬಿಜೆಪಿ ಎಂಎಲ್ಸಿ ರವಿಕುಮಾರ್ ಆರೋಪಿಸಿದರು.
Bigg News: ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್: ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ!
ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಕೆ.ಎನ್. ರಾಜಣ್ಣ, ಚಲುವರಾಯಸ್ವಾಮಿ ಇವರೆಲ್ಲಾ ಬುದ್ಧಿವಂತರು. ರಾಜ್ಯದಲ್ಲಿ ಬರ, ಕಾವೇರಿ ಸಮಸ್ಯೆ ಬಗ್ಗೆ ಚರ್ಚೆ ಆಗಬಾರದು ಅಂತ ಮೂರು ಡಿಸಿಎಂ ಚರ್ಚೆಗೆ ಬಿಟ್ಟಿದ್ದಾರೆ. ಇವರು ದಲಿತರನ್ನು ಸಿಎಂ ಮಾಡದೇ ಮೋಸ ಮಾಡಿದವರು. ನಾನೇ ಸಿಎಂ ಆಗಬೇಕು, ಐದೂ ವರ್ಷ ನಾನೇ ಸಿಎಂ ಅಂತ ಸಿದ್ದರಾಮಯ್ಯ ಅವರ ಆಪ್ತರಿಂದ ಹೇಳಿಸುತ್ತಿದ್ದಾರೆ. ಇವರಿಗೆ ತಾಕತ್ ಇದ್ದರೆ ಮೂರು ಡಿಸಿಎಂಗಳನ್ನು ಮಾಡಲಿ ಎಂದು ಸವಾಲು ಹಾಕಿದರು.
