ಬೆಂಗಳೂರು:- ಅತಿಥಿ ಶಿಕ್ಷಕರು, ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಸಂಭಾವನೆ ಹೆಚ್ಚಳ ಮಾಡುವ ಸಂಬಂಧ ಆರ್ಥಿಕ ಇಲಾಖೆ ಜೊತೆ ಚರ್ಚೆ ಮಾಡಲಾಗುತ್ತದೆ ಎಂದರು.
ರಾಜ್ಯದ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಸೂಕ್ತ ಸಂಭಾವನೆ ಸಿಗುತ್ತಿಲ್ಲ. ಮಾಸಿಕ ಸಂಭಾವನೆ ಹೆಚ್ಚು ಮಾಡಬೇಕು. ಅತಿಥಿ ಶಿಕ್ಷಕರಿಗೆ ಮತ್ತು ಉಪಸ್ಯಾಕರಿಗೆ ಗ್ರೂಪ್-ಡಿ ಸಿಬ್ಬಂದಿ, ಸೆಕ್ಯುರಿಟಿಗಳಿಗೆ ಸಿಗೋ ಸಂಬಳ ಸಿಗುತ್ತಿಲ್ಲ. ಹೀಗಾಗಿ ಸರ್ಕಾರ ಸಂಬಳ ಜಾಸ್ತಿ ಮಾಡಬೇಕು ಅಂತ ಒತ್ತಾಯ ಮಾಡಿದ್ರು.
ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, 2022 ರಲ್ಲಿ ಅತಿಥಿ ಶಿಕ್ಷಕರು, ಉಪನ್ಯಾಸ ವೇತನ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು.