ಹುಬ್ಬಳ್ಳಿ : ಸಿದ್ದರಾಮಯ್ಯ ಐದು ವರ್ಷ ಇರಬೇಕು ಎನ್ನುವ ಕ್ಲಿಯರ್ ಸಿಗ್ನಲ್ ಅನ್ನು ಹೈಕಮಾಂಡ್ ಕೊಡಬೇಕಿತ್ತು. ಸಿದ್ದರಾಮಯ್ಯ ಅವರನ್ನ ಕೈಕಟ್ಟಿ ಹಾಕುವ ಕೆಲಸ ನಡೆಯುತ್ತಿದೆ ಎಂದ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಪದವಿ ಕಿತ್ತಾಟ ವಿಚಾರವಾಗಿ ಸಂಸದ ಜಗದೀಶ್ ಶೆಟ್ಟರ್ ಈ ರೀತಿಯಾಗಿ ಪ್ರತಿಕ್ರಿಯಿಸಿದರು.
ಸಿದ್ದರಾಮಯ್ಯರನ್ನು ಕೈಕಟ್ಟಿ ಹಾಕುವುದರಿಂದ ರಾಜ್ಯದಲ್ಲಿ ಅತಂತ್ರ ಸರ್ಕಾರ ಆಗುತ್ತೆ. ಇಂತಹ ಪರಿಸ್ಥಿತಿಯಿಂದ ಸರ್ಕಾರಕ್ಕೂ ಡ್ಯಾಮೇಜ್ ಆಗುತ್ತೆ. ಆಡಳಿತ ವ್ಯವಸ್ಥೆ ಹದಗಡುತ್ತಿದೆ ಆಂತರಿಕ ಕಲಹದಿಂದ ಸರ್ಕಾರಕ್ಕೆ ತೊಂದರೆ ಆಗುತ್ತೆ. ಕಾಂಗ್ರೆಸ್ ಪಕ್ಷ ಈ ಬಗ್ಗೆ ದೃಢವಾದ ನಿರ್ಧಾರ ತೆಗೆದುಕೊಂಡು ಎಸ್.. ಆರ್.. ನೋ ಅಂತ ಹೇಳಬೇಕು. ಒಂದು ಡಿಸಿಎಂ ಇದ್ದಿದ್ದು ಮೂರು ಡಿಸಿಎಂ ಆಗಲಿ ಮುಖ್ಯಮಂತ್ರಿ ಬದಲಾವಣೆ ಆಗಲಿ ಅನ್ನೋ ಗೊಂದಲ ನಿರ್ಮಾಣ ಮಾಡಿದ್ದಾರೆ. ಇದರಿಂದಾಗಿ ಆಡಳಿತ ವ್ಯವಸ್ಥೆ ಹದಗೆಟ್ಟಿದೆ.
Food Safety: ಆಹಾರದಲ್ಲಿ ಕೃತಕ ಬಣ್ಣ ಬಳಸುವುದರಿಂದ ಏನೆಲ್ಲಾ ಆರೋಗ್ಯ ಸಮಸ್ಯೆಗಳಿದೆ ಗೊತ್ತಾ..? ಇಲ್ಲಿದೆ ಮಾಹಿತಿ
ಯಾರ ಮನಸಲ್ಲಿ ಏನಿದೆ ಅನ್ನೋದನ್ನ ಬೇರೆಯವರಿಂದ ಹೇಳಿಸುವ ಪ್ರಯತ್ನ ಆಗುತ್ತಿದೆ. ಏನು ಹೇಳಬೇಕು ಅನ್ನೋದನ್ನ ಹೈಕಮಾಂಡ್ ಮುಂದೆ ಹೇಳಬೇಕು. ನಾನು ಕಾಂಗ್ರೆಸ್ ನಲ್ಲಿ ಇದ್ದರೂ ಕೂಡ ಈ ಬಗ್ಗೆ ಗೊತ್ತಾಗಿರಲಿಲ್ಲ. ಸಿಎಂ ಹುದ್ದೆಗಾಗಿ ಮೊದಲಿನಿಂದಲೂ ಗುದ್ದಾಟ ಇದ್ದೇ ಇದೆ. ಈಗಲೂ ಅದು ಮುಂದುವರೆದಿದೆ. ಬಿಜೆಪಿ ಆಪರೇಷನ್ ಕಮಲ ಮತ್ತೊಂದು ಮಾಡುವುದು ಬೇಕಾಗಿಲ್ಲ. ಕಾಂಗ್ರೆಸ್ʼನ ಒಳ ಬೇಗುದಿಯಿಂದ ಶಾಸಕರ ಅಸಮಾಧಾನವೇ ಸರ್ಕಾರಕ್ಕೆ ಎಫೆಕ್ಟ್ ಆಗುತ್ತೆ ಎಂದರು.