ಮೈಸೂರು: ಮೈಸೂರು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ರೋಟರಿ ಐವರಿ ಸಿಟಿ ಸಂಯುಕ್ತ ಆಶ್ರಯದಲ್ಲಿ ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಂಡಿತವಾಗಿ ಮತದಾನ ಮಾಡುವೆ ಎಂಬ ಘೋಣ ವಾಕ್ಯದೊಂದಿಗೆ ನಡೆದ ಮತದಾನ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಾಯತ್ರಿ ಈ ಸಂದರ್ಭದಲ್ಲಿ ಹಾಜರಿದ್ದರು.
NPCI guidelines: ಒಂದು ವರ್ಷದಿಂದ ಯಾವುದೇ ವಹಿವಾಟು ನಡೆಸದ ಯುಪಿಐ ಐಡಿ, ಯುಪಿಐ ನಂಬರ್ ಡೀ ಆ್ಯಕ್ಟಿವೇಟ್: ಕಾರಣ!
ಕೋಟೆ ಆಂಜನೇಯಸ್ವಾಮಿ ದೇವಾಲಯದಿಂದ ಪ್ರಾರಂಭವಾದ ಜಾಥವು ನಗರದ ಚಿಕ್ಕಗಡಿಯಾರ ವೃತ್ತದಲ್ಲಿ ಅಂತ್ಯಗೊಂಡಿತು. ವಿವಿಧ ಸಂಘ ಸಂಸ್ಥೆಯಿಂದ ನೂರಾರು ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಉಪಆಯುಕ್ತರಾದ ಸೋಮಶೇಖರ್, ಉಪಕಾರ್ಯದರ್ಶಿ(ಅಭಿವೃದ್ಧಿ) ಡಾ.ಎಂ.ಕೃಷ್ಣರಾಜು, ಕ್ರೀಡಾಪಟು ಖುಷಿ ಸೇರಿದಂತೆ ಇತರರು ಹಾಜರಿದ್ದರು.