ಬೆಂಗಳೂರು:- ಪ್ರಯಾಣಿಕರಿಗೆ ದೀಪಾವಳಿ ಗಿಫ್ಟ್ ಕೊಟ್ಟಿರುವ NWKRTC ಸಂಸ್ಥೆಯು ವಿಶೇಷ ಬಸ್ ಸೌಲಭ್ಯ ಒದಗಿಸಿದೆ. ಈ ಬಗೆಗಿನ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.
Amit Shah: 2026ರಲ್ಲಿ ಬಿಜೆಪಿ ಎರಡರಷ್ಟು ಬಹುಮತದೊಂದಿಗೆ ಬಂಗಾಳದಲ್ಲಿ ಸರ್ಕಾರ ರಚಿಸಲಿದೆ: ಅಮಿತ್ ಶಾ
ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೆಚ್ಚುವರಿ ಬಸ್ಗಳನ್ನು ರಸ್ತೆಗೆ ಇಳಿಸಲಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಎನ್ಡಬ್ಲೂಕೆಆರ್ಟಿಸಿ ಮಾಹಿತಿ ನೀಡಿದೆ.
ದೂರದ ಸ್ಥಳಗಳಿಂದ ತಮ್ಮ ಸ್ವಂತ ಊರುಗಳಿಗೆ ತೆರಳುವ ಹಾಗೂ ಹಬ್ಬ ಮುಗಿಸಿ ಹಿಂದಿರುವಗ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಎನ್ಡಬ್ಲುಕೆಆರ್ಟಿಸಿ ತಿಳಿಸಿದೆ. ಮಂಗಳವಾರ ರಿಂದ ಶುಕ್ರವಾರ ಹಾಗೂ ರವಿವಾರ ಮತ್ತು ಸೋಮವಾರ ರಂದು ಈ ನಗರಗಳಿಂದ ಹೆಚ್ಚುವರಿ ಬಸ್ಗಳು ಸಂಚರಿಸಲಿವೆ.
ಬೆಂಗಳೂರು, ಮಂಗಳೂರು, ಪುಣೆ, ಗೋವಾ, ಹೈದರಾಬಾದ್ ನಗರಗಳಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ ಮತ್ತು ಬಾಗಲಕೋಟೆ ಸೇರಿದಂತೆ ಇನ್ನೀತರ ಸ್ಥಳಗಳಿಗೆ ಹೆಚ್ಚುವರಿ ಬಸ್ಗಳು ಕಾರ್ಯ ನಿರ್ವಹಿಸಲಿವೆ. ಪ್ರಯಾಣಿಕರು ಇದರ ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ಇ-ಟಿಕೇಟ್ ಬುಕಿಂಗ್ನ್ನು www.ksrtc.karnataka.gov.in ವೆಬ್ಸೈಟ್ ಮುಖಾಂತರ ಮಾಡಬಹುದಾಗಿದ್ದು, ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ನಿಗಮ ತಿಳಿಸಿದೆ.