ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಜನತೆಗೆ ದೀಪಾವಳಿ ಶುಭಾಶಯ ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು, “ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಆರೋಗ್ಯವನ್ನು ತರಲಿ ಎಂದು ಹೇಳಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ದೇಶದ ಜನತೆಗೆ ದೀಪಾವಳಿ ಶುಭಾಶಯಗಳನ್ನು ಕೋರಿದ್ದಾರೆ.