ಬಳ್ಳಾರಿ:- ಡಿಕೆ ಶಿವಕುಮಾರ್ ಅವರು ಸರ್ಕಾರವನ್ನು ಬುಗುರಿಯಂತೆ ಆಡಿಸುತ್ತಿದ್ದಾರೆ ಎಂದು ಮಾಜಿ ಸಚಿವ ಶ್ರೀ ರಾಮುಲು ಹೇಳಿದ್ದಾರೆ
ಈ ಸಂಬಂಧ ಮಾತನಾಡಿದ ಅವರು,ಇಡೀ ಸರ್ಕಾರವನ್ನೇ ಡಿಕೆ ಶಿವಕುಮಾರ ಕೈಗೊಂಬೆ ಮಾಡಿಕೊಂಡಿದ್ದಾರೆ. ಸಿನಿಮಾದಲ್ಲಿ ತೋರಿಸುವ ರೀತಿಯಲ್ಲಿ ಸರ್ಕಾರವನ್ನು ಬುಗುರಿಯಂತೆ ಆಡಿಸುತ್ತಿದ್ದಾರೆ. ಗೊಂಬೆ ಆಡುತ್ತೈತೆ ಎನ್ನುವ ಹಾಗೆ ಡಿಕೆಶಿಗಾಗಿ ಮತ್ತೊಮ್ಮೆ ಹೊಸ ಹಾಡು ಬರೆಯಬೇಕು ಎಂದರು.
ಸರ್ಕಾರ ಮತ್ತು ಕಾನೂನಿನ ಮಧ್ಯೆ ತಿಕ್ಕಾಟ, ಭಿನ್ನಾಪ್ರಾಯ ಪ್ರಾರಂಭವಾಗಿದೆ. ಸರ್ಕಾರ ಮತ್ತು ಕಾನೂನು ಮಧ್ಯೆ ದೊಡ್ಡ ಆತಂಕ ನಿರ್ಮಾಣವಾಗಿದೆ. ಡಿಕೆ ಶಿವಕುಮಾರ್ ಮುಂದೆ ಸರ್ಕಾರ ನೇ ತಲೆ ಬಾಗುತ್ತಿದೆಯೇ ಅಥವಾ ಸರ್ಕಾರದ ಮುಂದೆ ಇವರು ತಲೆ ಬಾಗ್ತಿದ್ದಾರಾ ಗೊತ್ತಾಗ್ತಿಲ್ಲ. ಸಿಬಿಐ ತನಿಖೆ ಪ್ರಕರಣದಲ್ಲಿ ಡಿಕೆಶಿ ತಪ್ಪು ಮಾಡಿಲ್ಲ ಅಂದ್ರೆ ಹೊರಬರುವ ವಿಶ್ವಾಸ ಇರಬೇಕಿತ್ತು. ಆದರೆ ಸರ್ಕಾರವನ್ನು ದುರುಪಯೋಗಪಡಿಸಿಕೊಂಡು ಸಿಬಿಐ ಕೇಸ್ ಹಿಂಪಡೆಯುವಂತೆ ನೋಡಿಕೊಂಡಿದ್ದಾರೆ. ಒಂದು ರೀತಿ ಸರ್ಕಾರವನ್ನೇ ಡಿಕೆಶಿ ಕೆಳಗಡೆ ಇಟ್ಟುಕೊಂಡಿದ್ದಾರೆ. ಹೀಗಾಗಿ ಇಷ್ಟೊಂದು ದೊಡ್ಡ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದರು.