ಬೆಂಗಳೂರು:- ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷರ ಬದಲಾವಣೆ ಆಗಬೇಕು ಎನ್ನುವ ಬಗ್ಗೆ ಕಾಂಗ್ರೆಸ್ನಲ್ಲೂ ಜೋರು ಚರ್ಚೆಗಳು ನಡೆದಿವೆ. ಇದೀಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರು ಇದೀಗ ಬಿಗ್ ಅಪ್ಡೇಟ್ ಕೊಟ್ಟಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಆಗಿರುವ ಡಿ.ಕೆ ಶಿವಕುಮಾರ್ ಅವರಿಗೆ ಭಾರೀ ಪ್ರಭಾವಿ ಇಲಾಖೆ ಹಾಗೂ ರಾಜ್ಯಾಧ್ಯಕ್ಷರ ಹುದ್ದೆಯೂ ಇದೆ ಎಂದು ಕಾಂಗ್ರೆಸ್ನ ಕೆಲವು ಸಚಿವರು ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು.
ಪರೀಕ್ಷೆಗೆ ಓದು ಎಂದು ಗದರಿದ ತಾಯಿ: 20ನೇ ಮಹಡಿಯಿಂದ ಜಿಗಿದು ಬಾಲಕಿ ಸೂಸೈಡ್!
ರಾಜ್ಯದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ಕಳೆದ ಒಂದು ವರ್ಷದಿಂದಲೂ ಚರ್ಚೆ ನಡೆಯುತ್ತಿದೆ. ಬಿಜೆಪಿಯಲ್ಲಿ ಈ ಬಗ್ಗೆ ಜೋರು ಚರ್ಚೆ ನಡೆದಿದ್ದರೆ. ಕಾಂಗ್ರೆಸ್ನಲ್ಲೂ ಈ ಬಗ್ಗೆ ಜೋರು ಚರ್ಚೆಗಳು ನಡೆದಿದ್ದು, ಬಹಿರಂಗವಾಗಿಯೇ ಕೆಲವರು ಹೇಳಿಕೆ ನೀಡಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳ ರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ಹೈಕಮಾಂಡ್ ಕೊನೆಗೂ ಒಂದು ನಿರ್ಧಾರಕ್ಕೆ ಬಂದಂತಿದೆ. ಇದೀಗ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆಯ ವಿಷಯ ಕ್ಲೈಮ್ಯಾಕ್ಸ್ ತಲುಪಿದೆ.
ಈ ಹಿಂದೆ ಎಂದೂ ರಾಜ್ಯಾಧ್ಯಕ್ಷರ ಬದಲಾವಣೆ ವಿಷಯ ಎರಡೂ ರಾಜಕೀಯ ಪಕ್ಷಗಳಲ್ಲಿ ಏಕಕಾಲಕ್ಕೆ ಹಾಗೂ ಈ ಮಟ್ಟಕ್ಕೆ ಚರ್ಚೆಯಾಗಿರಲಿಲ್ಲ. ಈ ಬಾರಿ ಬಿಜೆಪಿಯಲ್ಲಿ ಅಸಮಾಧಾನ ತೀವ್ರವಾಗಿದೆ. ಕಾಂಗ್ರೆಸ್ ಸಹ ಈ ವಿಚಾರದಲ್ಲಿ ಹಿಂದೆ ಬಿದ್ದಿಲ್ಲ. ಸಚಿವ ಸತೀಶ್ ಜಾರಕಿಹೊಳಿ ಅವರು ಈ ವಿಷಯದ ಬಗ್ಗೆ ಬಹಿರಂಗವಾಗಿಯೇ ಪ್ರಸ್ತಾಪಿಸಿದ್ದರು. ಇದಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಸಹ ದನಿ ಗೂಡಿಸಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ದಿನಾಂಕ ನಿಗದಿ ಮಾಡಲಾಗಿದೆ.
ವಿವಿಧ ರಾಜ್ಯಗಳ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಚರ್ಚೆ ನಡೆದಿದ್ದು. 8 ದಿನದಲ್ಲಿ ಎಲ್ಲವೂ ಬದಲಾಗಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಒಲವು ತೋರಿದೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ನಲ್ಲಿ ಒಬ್ಬರಿಗೆ ಒಂದು ಹುದ್ದೆ ಎನ್ನುವ ಕಾನ್ಸೆಪ್ಟ್ ಫಾಲೋ ಮಾಡಲಾಗುತ್ತಿದೆ. ಅಲ್ಲದೆ ಬೇರೆಯವರಿಗೆ ಅವಕಾಶ ಕೊಡುವ ಉದ್ದೇಶ ಹಾಗೂ ವಿವಿಧ ಕಾರಣಕ್ಕೆ ಡಿ.ಕೆ ಶಿವಕುಮಾರ್ ಅವರನ್ನು ಬದಲಾವಣೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ