ಬೆಂಗಳೂರು: ಇಂದು ಸದಾಶಿವನಗರದ ಕೆಪಿಸಿಸಿ ಕಚೇರಿಯಲ್ಲಿ ಕೇರಳ ಪ್ರತಿಪಕ್ಷ ನಾಯಕ ವಿ.ಡಿ. ಸತೀಶನ್ ಅವರನ್ನು ಡಿ.ಕೆ ಶಿವಕುಮಾರ್ ಭೇಟಿ ಮಾಡಿದರು. ಬಳಿಕ ಉಭಯ ರಾಜ್ಯಗಳ ಹಲವು ವಿಷಯಗಳ ಕುರಿತು ಸಮಾಲೋಚನೆ ನಡೆಸಿದರು. ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವಿನ ನೀರು ಹಂಚಿಕೆ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ಪ್ರವಾಹದ ವೇಳೆ ಪರಸ್ಪರ ಸಹಕಾರ ಮಾಡಿಕೊಳ್ಳುವ ಕುರಿತು ಚರ್ಚೆ ನಡೆಸಿದರು.
ಮಾತುಕತೆ ಮೂಲಕ ಸೌಹಾರ್ದಯುತವಾಗಿ ಉಭಯ ರಾಜ್ಯಗಳ ನಡುವಿನ ಜಲ ವಿವಾದಗಳನ್ನು ಬಗೆಹರಿಸಿಕೊಳ್ಳಲು ಉಭಯ ನಾಯಕರು ಮುಂದಾಗಿದ್ದಾರೆ. ಅಂತರಾಜ್ಯ ಜಲವಿಷಯ ಮತ್ತು ನದಿ ನೀರು ಹಂಚಿಕೆ ಕುರಿತು ವಿಸ್ತೃತವಾಗಿ ಮಾತುಕತೆ ನಡೆಸಿ ಶೀಘ್ರದಲ್ಲಿಯೇ ಸಭೆ ನಡೆಸಬೇಕು ಎಂಬುದರ ಬಗ್ಗೆ ಮಾತುಕತೆ ನಡೆಸಿದರು. ಈ ವೇಳೆ ಕಾರ್ಯಾಧ್ಯಕ್ಷರಾದ ಧ್ರುವನಾರಾಯಣ್, ಪರಿಷತ್ ಸದಸ್ಯರಾದ ಎಸ್. ರವಿ ಮೊದಲಾದವರು ಉಪಸ್ಥಿತರಿದ್ದರು.
