ಬೆಂಗಳೂರು: ಎತ್ತಿನಹೊಳೆ ಯೋಜನೆ ಸಂಬಂಧ ಸಿಎಂ ಹುದ್ದೆಯ ಆಕಾಂಕ್ಷಿಗಳಾದ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವ ಜಿ ಪರಮೇಶ್ವರ್ ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಎತ್ತಿನ ಹೊಳೆ ಯೋಜನೆ ಉದ್ಘಾಟನೆ ಬಳಿಕ ಡಿಸಿಎಂ ಮೊದಲ ಸಭೆಯಾಗಿದ್ದು, ಇದೇ ತಿಂಗಳ 6 ನೇ ತಾರಿಕಿನಂದು ಮಹತ್ವಾಕಾಂಕ್ಷೆಯ ಯೋಜನೆ ಉದ್ಘಾಟನೆಯಾಗಿತ್ತು. ಸದ್ಯದ ಪರಿಸ್ಥಿತಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್, ಸಚಿವ ಸತೀಶ್ ಜಾರಕಿಹೊಳಿ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಗಳು ಎನ್ನಲಾಗುತ್ತಿದೆ.
Post Office Scheme: ಅಂಚೆ ಕಚೇರಿಯ ಈ ಯೋಜನೆಯಡಿ ಹೂಡಿಕೆ ಮಾಡಿದ್ರೆ 10 ವರ್ಷದಲ್ಲಿ ನಿಮ್ಮ ಹಣ ಡಬಲ್!
ಕೆಲವು ದಿನಗಳ ಹಿಂದಷ್ಟೇ ಡಿಕೆ ಶಿವಕುಮಾರ್ ಹಾಗೂ ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇದೀಗ ಗೃಹ ಸಚವರನ್ನು ಡಿಸಿಎಂ ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ. ಕೆಲವು ಮೂಲಗಳ ಪ್ರಕಾರ, ಉಭಯ ನಾಯಕರ ಭೇಟಿ ಹಾಗೂ ಸಮಾಲೋಚನೆಗೆ ಎತ್ತಿನಹೊಳೆ ನೆಪ ಮಾತ್ರ. ಡಿಕೆ ಶಿವಕುಮಾರ್ ಹಾಗೂ ಪರಮೇಶ್ವರ್ ಭೇಟಿ ಹಿಂದಿನ ಅಸಲಿ ಕಾರಣ ಬೇರೆಯೇ ಇದೆ ಎನ್ನಲಾಗುತ್ತಿದೆ.