ಬೆಂಗಳೂರು:- ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ನಡೆದ ವಿದ್ಯಮಾನಗಳ ಬಗ್ಗೆ ಡಿಕೆ ಶಿವಕುಮಾರ್ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ನನ್ನ ಸಿಎಂ ಮಾಡಿದ್ರೆ ವಾಪಸ್ ಬರುವುದಾಗಿ ಮುಂಬೈಗೆ ತೆರಳಿದ್ದ ಶಾಸಕರು ಹೇಳಿದ್ದರು. ಮುಂಬೈನಲ್ಲಿದ್ದ ಎಸ್.ಟಿ.ಸೋಮಶೇಖರ್, ಗೋಪಾಲಯ್ಯ ಹಾಗೆ ಹೇಳಿದ್ದರು. ಅಂದಿನ ಸಿಎಂ ಕುಮಾರಸ್ವಾಮಿಗೆ ಖುದ್ದು ಕರೆ ಮಾಡಿ ಹೇಳಿದ್ದರು. ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವುದಾದರೆ ವಾಪಸ್ ಬರುತ್ತೇವೆ ಎಂದು ಹೇಳಿದ್ದರು. ಆದರೆ, ಶಾಸಕರ ಬೇಡಿಕೆ ಬಗ್ಗೆ ಕುಮಾರಸ್ವಾಮಿ ಆಗ ಬಾಯಿ ಬಿಡಲೇ ಇಲ್ಲ’ ಎಂದು ಹೇಳಿದ್ದಾರೆ.
ಶಾಸಕರ ಬೇಡಿಕೆ ಬಗ್ಗೆ ಆಗ ಬಾಯಿ ಬಿಡದೇ ಇದ್ದ ಕುಮಾರಸ್ವಾಮಿ ಈಗ ಬೇಕಿದ್ದರೆ 19 ಶಾಸಕರು ಬೆಂಬಲ ಕೊಡ್ತೀವಿ ಎಂದು ಹೇಳ್ತಾರೆ. ಡಿ.ಕೆ.ಶಿವಕುಮಾರ್ ಸಿಎಂ ಆದರೆ ಬೆಂಬಲ ಕೊಡುತ್ತೇವೆ ಅಂತಾರೆ. ಹೆಚ್.ಡಿ.ಕುಮಾರಸ್ವಾಮಿ ಮಾತನ್ನು ನಂಬುವುದಕ್ಕೆ ನಾವು ದಡ್ಡರಾ ಎಂದು ಪ್ರಶ್ನಿಸಿದ್ದಾರೆ