ಬೆಂಗಳೂರು:- ಡಿಕೆ ಸುರೇಶ್ಗೆ ಗುಂಡಿಕ್ಕಬೇಕು ಎಂಬ ಈಶ್ವರಪ್ಪ ಹೇಳಿಕೆಗೆ ಜಿ ಪರಮೇಶ್ವರ್ ಕೆಂಡಾಮಂಡಲರಾಗಿದ್ದಾರೆ.
ಈಶ್ವರಪ್ಪಗೆ ಪ್ರತ್ಯೇಕ ಕಾನೂನು ಮಾಡಲು ಹೇಳಿ, ಈ ಕಾನೂನು ಮೀರಿ ಯಾರು ಕೂಡ ವರ್ತಿಸಬಾರದು ಎಂದು ಕಿಡಿಕಾರಿದ್ದಾರೆ.
ಮೆಟ್ರೋ ಪ್ರಯಾಣಿಕರೇ ಗಮನಿಸಿ: ಫೆ.11ರಂದು ಎರಡು ಗಂಟೆ ಈ ಮಾರ್ಗದಲ್ಲಿ ರೈಲು ಸಂಚಾರ ಇರಲ್ಲ!
ಇನ್ನು ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ವಿಚಾರ ‘ಕೋಮುಸೌಹಾರ್ದತೆ ಕದಡುವವರನ್ನು ನೋಡಿ ಸುಮ್ಮನೆ ಕೂರಲ್ಲ. ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು. ಚಕ್ರವರ್ತಿ ಸೂಲಿಬೆಲೆ ಅಷ್ಟೇ ಅಲ್ಲ, ಯಾರೇ ಈ ರೀತಿ ಹೇಳಿಕೆ ಕೊಟ್ಟರೂ , ಅಂಥವರ ವಿರುದ್ಧ ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದರು.
ಇದೇ ವೇಳೆ ಹುಕ್ಕಾ ಬಾರ್ಗಳಲ್ಲಿ ಡ್ರಗ್ಸ್ ಸಪ್ಲೈ ಮಾಡುತ್ತಾರೆ ಎಂಬುದು ಸಾಭೀತಾಗಿದೆ. ಈ ಹಿನ್ನಲೆ ರಾಜ್ಯದಲ್ಲಿ ಹುಕ್ಕಾ ಬಾರ್ಗಳನ್ನು ನಮ್ಮ ಸರ್ಕಾರ ನಿಷೇಧಿಸಿದೆ. ಈ ಮುಖಾಂತರ ಆರೋಗ್ಯ ಇಲಾಖೆ ಉತ್ತಮ ನಿರ್ಧಾರ ತೆಗೆದುಕೊಂಡಿದೆ ಎಂದರು. ಜೊತೆಗೆ ಎಡಿಜಿಪಿ ಪ್ರತಾಪ್ ರೆಡ್ಡಿ ಸ್ವಯಂನಿವೃತ್ತಿಗೆ ಅರ್ಜಿ ಸಲ್ಲಿಕೆ ವಿಚಾರ, ‘ಅದು ಪ್ರತಾಪ್ ರೆಡ್ಡಿ ವೈಯಕ್ತಿಕ ವಿಚಾರ, ಆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.