ತುಮಕೂರು: ರಾಜಕೀಯ ದ್ವೇಷದಿಂದ ಯೂತ್ ಕಾಂಗ್ರೆಸ್ (Congress) ಪ್ರಧಾನ ಕಾರ್ಯದರ್ಶಿಗೆ ಚಾಕು ಇರಿದ ಪ್ರಕರಣ ಕುಣಿಗಲ್ ತಾಲ್ಲೂಕಿನ ನಡೇಮಾವಿನಪುರದಲ್ಲಿ ನಡೆದಿದೆ. ಡಿ.ಕೆ ಸುರೇಶ್ (D.K Suresh) ನಾಮಪತ್ರ ಸಲ್ಲಿಕೆಗೆ ತೆರಳಿದ್ದಕ್ಕೆ ಚಾಕು ಇರಿಯಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ವೆಂಕಟಗೌಡನಪಾಳ್ಯದ ಕೀರ್ತಿ ಹಲ್ಲೆಗೊಳಗಾದ ಕಾಂಗ್ರೆಸ್ ಮುಖಂಡ ಎಂದು ತಿಳಿದು ಬಂದಿದೆ. ಚಂದ್ರ, ಜಗದೀಶ್ ಹಾಗೂ ಸುನೀಲ್ ಎಂಬ ಮೂವರು, ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆಗೆ ಯಾಕೆ ತೆರಳಿದ್ದೆ ಎಂದು ಕೀರ್ತಿಯವರ ಬಳಿ ಜಗಳ ಆರಂಭಿಸಿದ್ದಾರೆ.
PUC ಪಾಸಾದವರಿಗೆ ಉದ್ಯೋಗವಕಾಶ! ಪರೀಕ್ಷೆ ಇಲ್ಲದೆ ನೇರ ನೇಮಕಾತಿ – ತಿಂಗಳಿಗೆ ₹63,000 ಸಂಬಳ.!
ಬಳಿಕ ಮೂವರು ಸೇರಿ ಕೀರ್ತಿ ಮೇಲೆ ಚಾಕು, ದೊಣ್ಣೆಯಿಂದ ತೀವ್ರವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಚಾಕು ಇರಿತದಿಂದ ಗಾಯಗೊಂಡ ಕೀರ್ತಿಯನ್ನು ಕುಣಿಗಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಕೀಯ ವೈಷಮ್ಯ ಹಿನ್ನೆಲೆ ಹಲ್ಲೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.