ತಮಿಳುನಾಡು: ತಮಿಳುನಾಡಿನ ಕುಂಭಕೋಣಂ ಜಿಲ್ಲೆಯ ಅಯ್ಯಾವುಡಿಯಲ್ಲಿರುವ ಪ್ರಾಚೀನ ಪ್ರತ್ಯಂಗಿರಾ ದೇವಿ ದೇವಸ್ಥಾನಕ್ಕೆ ಡಿಕೆ ಶಿವಕುಮಾರ್ ದಂಪತಿಗಳು ಭೇಟಿ ನೀಡಿ ವಿಷೇಶ ಪೂಜೆ ಸಲ್ಲಿಸಿದ್ದಾರೆ. ತಮಿಳುನಾಡಿನ ಕುಂಬಕೋಣಂ ಹಾಗೂ ಕಾಂಚಿಪುರಂ ದೇವಸ್ಥಾನಗಳಿಗೆ ಡಿಕೆ ಶಿವಕುಮಾರ್ ಕುಟುಂಬ ಸಮೇತ ಭೇಟಿ ನೀಡಿದ್ದು,
ಕುಂಬಕೋಣಂನಲ್ಲಿ ಪ್ರತ್ಯಂಗಿರ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಕಾಂಚಿಪುರಂನ ವರದರಾಜುಪೆರುಮಾಳ್ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
KPSC Recruitment: ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: ತಿಂಗಳಿಗೆ ₹ 48,000 ಸಂಬಳ – ಇಂದೇ ಅರ್ಜಿ ಸಲ್ಲಿಸಿ
ತಮಿಳುನಾಡಿಗೆ ಇಂದು ಹೆಲಿಕಾಪ್ಟರ್ ನಲ್ಲಿ ಬಂದಿಳಿದ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸ್ಥಳೀಯ ಮೇಯರ್ ಶರವಣನ್, ತಂಜಾವೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲೋಕನಾಥನ್, ಕಾಂಗ್ರೆಸ್ ಮುಖಂಡರಾದ ಕೃಷ್ಣಸ್ವಾಮಿ, ವೆಂಕಟೇಶ್ ಮತ್ತಿತರರು ಬರಮಾಡಿಕೊಂಡರು. ಡಿಕೆಶಿ ಅವರ ಈ ಭೇಟಿಯು ಕುತೂಹಲದೊಂದಿಗೆ ಭಾರೀ ಚರ್ಚೆಗೆ ಕಾರಣವಾಗಿದೆ.
ಪ್ರತ್ಯಂಗಿರಾ ದೇವಿಗೆ ಮಾಡುವ ಪೂಜೆ, ಹೋಮವು ಅತ್ಯಂತ ಶಕ್ತಿಶಾಲಿ ಎಂಬ ನಂಬಿಕೆ ಭಕ್ತರಲ್ಲಿದೆ. ಪ್ರತ್ಯಂಗಿರಾ ದೇವಿಯ ಆಶೀರ್ವಾದದಿಂದ ನಮಗೆ ಯಾವುದೇ ನಕಾರಾತ್ಮಕ ಶಕ್ತಿ ಅಥವಾ ದುಷ್ಟ ಶಕ್ತಿ ತೊಂದರೆಯನ್ನು ನೀಡುವುದಿಲ್ಲ ಎಂಬ ನಂಬಿಕೆ ತಮಿಳುನಾಡು ಹಾಗೂ ಕೇರಳದ ಭಕ್ತರಲ್ಲಿದೆ. ಪ್ರತ್ಯಂಗಿರಾ ಹೋಮವನ್ನು ಯಾವ ಸ್ಥಳದಲ್ಲಿ ಮಾಡುತ್ತೇವೋ, ಆ ಸ್ಥಳದಲ್ಲಿ ಎಂದಿಗೂ ಕೂಡ ನಕಾರಾತ್ಮಕ ಶಕ್ತಿಗಳು ಪ್ರವೇಶವನ್ನು ಪಡೆಯುವುದಿಲ್ಲ ಎಂಬ ನಂಬಿಕೆ ಇದೆ.