ಬೆಂಗಳೂರಿನ ಶ್ವಾಸಯೋಗ ಪೀಠಕ್ಕೆ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಭೇಟಿ ವೇಳೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಲ್ಲಿ ಸ್ವಾಮೀಜಿಗಳಿಗೆ ಡಿಕೆಶಿ ಆಹ್ವಾನಿಸಿದ್ದು, ಕಾವೇರಿ ನದಿ ಪಾತ್ರದಲ್ಲಿ ಹರಿಯುವ ನೀರು ಅನುಪಯುಕ್ತವಾಗಿ ಸಮುದ್ರ ಸೇರುತ್ತಿದೆ. ಸುಮಾರು 66 ಟಿಎಂಸಿ ನೀರಿನ ಸದ್ಬಳಕೆಯಿಂದ 400 ಮೆಗಾವ್ಯಾಟ್ ನಷ್ಟು ವಿದ್ಯುತ್ ಉತ್ಪಾದನೆ ಹಾಗೂ ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಬಹುದಾಗಿದೆ ಎಂಬುದರ ಬಗ್ಗೆ ಡಿ.ಕೆ ಶಿವಕುಮಾರ್ ಅವರು ಮಾಹಿತಿ ನೀಡಿದರು. ಹಾಗೂ ಈ ಪಾದಯಾತ್ರೆಗೆ ಡಿಕೆ ಶಿವಕುಮಾರ್ ಅವರಿಗೆ ಸ್ವಾಮೀಜಿಗಳು ಶುಭ ಹಾರೈಸಿದ್ದಾರೆ.

