ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿದ ಆಸ್ತಿ ಗಳಿಕೆ ಕೇಸ್ಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ.
ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಕೇಸ್ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ಗೆʼ ಬಗೆಹರಿಯದ ಸಂಕಷ್ಟ ಶುರುವಾಗಿದ್ದು ಈಗ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ.
H.D.Devegowda: ಸಿದ್ದರಾಮಯ್ಯ, ಡಿಕೆಶಿ ನಾಯಕತ್ವದಲ್ಲೇ ಕಾಂಗ್ರೆಸ್ ಅಂತ್ಯ: HDD ಭವಿಷ್ಯ!
ಲೋಕಾಯುಕ್ತಕ್ಕೆ ತನಿಖೆ ನಡೆಸಲು ಮಾಡಿದ್ದ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು ಕ್ಯಾಬಿನೆಟ್ ಆದೇಶದ ಮೇರಗೆ ಡಿಕೆಶಿ ಪ್ರಕರಣ ಲೋಕಾಯುಕ್ತಕ್ಕೆ ನೀಡಿದ್ದ ರಾಜ್ಯ ಸರ್ಕಾರ ಡಿ.22 ರಂದು ಲೋಕಾಯುಕ್ತ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ ಮಾಡಿತ್ತು
ಆದೇಶ ಪ್ರತಿ ಪಡೆದ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿದ ಸಿಬಿಐ ಇಂದು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ಬರುವ ಸಾಧ್ಯತೆ ಹಾಗೆ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬರುವ ಸಾಧ್ಯತೆ ಇದೆ.
ಡಿಕೆ ಶಿವಕುಮಾರ್ನ್ನು ಲೋಕಾಯುಕ್ತ ತನಿಖೆಗೆ ವಹಿಸುವ ಸರ್ಕಾರದ ಕ್ರಮ ಪ್ರಶ್ನಿಸಿ ಇಂದು ಸಿಬಿಐ ಹೈಕೋರ್ಟ್ಗೆ ಮನವಿ ಸಲ್ಲಿಸಲಿದೆ. ಇದೇ ವೇಳೆ ಡಿಕೆ ಶಿವಕುಮಾರ್ ವಿರುದ್ಧ CBI ತನಿಖೆಗೆ ಸಮ್ಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಶಾಸಕ ಯತ್ನಾಳ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕೂಡ ನಡೆಯಲಿದೆ.