ಬೆಂಗಳೂರು:- ಹಾಸನ ಸಮಾವೇಶಕ್ಕೆ ಏನೇನೋ ಕಲ್ಪಿಸೋದು ಬೇಡ ಎಂದು ಸಚಿವ ಡಾ.ಎಂ.ಸಿ ಸುಧಾಕರ್ ಹೇಳಿದ್ದಾರೆ.
ಮಧುಮೇಹ ರೋಗಿಗಳೇ ಗಮನಿಸಿ: ಚಳಿಗಾಲದಲ್ಲಿ ನಿತ್ಯ ಈ ತರಕಾರಿ ತಿನ್ನಬೇಕಂತೆ!
ಈ ಸಂಬಂಧ ಮಾತನಾಡಿದ ಅವರು, ಹಾಸನದಲ್ಲಿ ನಡೆಯುತ್ತಿರುವ ಸಮಾವೇಶ ಪಕ್ಷದ ಸಮಾವೇಶ. ಕಾಂಗ್ರೆಸ್ನಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.
ಹಾಸನ ಸಮಾವೇಶ ಗೊಂದಲ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹಾಸನ ಅಹಿಂದ ಸಮಾವೇಶ ಅಲ್ಲ. ಏನೇನೋ ಕಲ್ಪನೆ ಮಾಡಿಕೊಳ್ಳುವುದನ್ನು ಬಿಡಬೇಕು. ಹಾಸನ ಕಾರ್ಯಕ್ರಮ ಪಕ್ಷದ ಕಾರ್ಯಕ್ರಮ. ಹಿತೈಷಿಗಳು ಸೇರಿ ವೇದಿಕೆಯಲ್ಲಿ ಇದು ಪಕ್ಷದ ಕಾರ್ಯಕ್ರಮ ಎಂದು ಮಾಡುತ್ತಿದ್ದಾರೆ. ಯಾವ ಊಹಾಪೋಹಗಳಿಗೆ ಬೆಲೆ ಕೊಡಬೇಡಿ ಎಂದರು.
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪಕ್ಷ ಸಂಘಟನೆಗಾಗಿ ಸಮಾವೇಶ ಮಾಡುತ್ತಿದ್ದಾರೆ. ಬಿಜೆಪಿಯವರು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮಾತಾಡಿದರೆ ಸರ್ಕಾರದಲ್ಲಿ ಹಣ ಇಲ್ಲ, ಸರ್ಕಾರ ದಿವಾಳಿ ಆಗಿದೆ ಎಂದು ಹೇಳುತ್ತಾರೆ. ಇಲಾಖೆಯಲ್ಲಿ ಹಣ ಇದೆ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ನಾವೆಲ್ಲರೂ ಒಟ್ಟಾಗಿ ಇದ್ದೇವೆ. ಜನ ಕೊಟ್ಟಿರುವ ಅಧಿಕಾರವನ್ನು ಜವಾಬ್ದಾರಿಯುತವಾಗಿ ನಿರ್ವಹಣೆ ಮಾಡುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.