ಬೆಂಗಳೂರು: ರಾಜ್ಯ ಸರ್ಕಾರ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ದಾರರಿಗೆ ಶಾಕ್ ನೀಡಿದೆ. ಈವರೆಗೂ ಸಹ ಆಧಾರ್ (ಇ-ಕೆವೈಸಿ) ಜೋಡಣೆಯಾಗದ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ಗಳನ್ನು ಸಸ್ಪೆಂಡ್ ಮಾಡಲಾಗ್ತಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಈಗಾಗಲೇ ಲಕ್ಷಾಂತರ ಎಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿದ್ದು, ಸುಮಾರು 60 ಸಾವಿರ ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ಗೆ ವರ್ಗಾಯಿಸಲಾಗಿದೆ. ರಾಜ್ಯದಲ್ಲಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿದ ಬೆನ್ನಲ್ಲೇ ಆಹಾರ ಇಲಾಖೆ ಈಗ ಎಪಿಎಲ್ ಕಾರ್ಡ್ದಾರರಿಗೂ ಸಹ ಬಿಸಿ ಮುಟ್ಟಿಸಿದೆ.
ರಾಜ್ಯದಲ್ಲಿ ಪ್ರಸ್ತುತ 25,62,562 ಎಪಿಎಲ್ ಕಾರ್ಡ್ಗಳಿದ್ದು, ಅದರಲ್ಲಿ 87,86,886 ಸದಸ್ಯರಿದ್ದಾರೆ. ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ’ಯಡಿ ಎಪಿಎಲ್ ಪಡಿತರದಾರರಿಗೆ ಕೆಜಿ ಅಕ್ಕಿಗೆ 15 ರೂ.ನಂತೆ 10ಕೆಜಿ ಅಕ್ಕಿ ನೀಡಲಾಗುತ್ತದೆ. ಇದಲ್ಲದೇ ಬಿಪಿಎಲ್ ಕಾರ್ಡ್ಗೆ ಕೆಲವೊಂದು ಷರತ್ತು ಹಾಕುವ ಮೂಲಕ ಸರ್ಕಾರ ಉಳಿತಾಯಕ್ಕೆ ಮುಂದಾಗಿದೆ. ಸಿಎಂ ಸಿದ್ದರಾಮಯ್ಯ ಆಪರೇಷನ್ ಬಿಪಿಎಲ್ ಕಾರ್ಡ್ಗೆ ಸೂಚಿಸಿದ ಬೆನ್ನಲ್ಲೇ ಇಲಾಖೆಯಿಂದ ಬೋಗಸ್ ಕಾರ್ಡ್ ತಡೆಯುವ ಸಲುವಾಗಿ ರಾಜ್ಯಾದ್ಯಂತ ರೇಷನ್ ಕಾರ್ಡ್ ಪರಿಶೀಲನೆ ಕಾರ್ಯ ನಡೆದಿತ್ತು.