ಕೆಲ ಮಂದಿ ಬೆಳಗ್ಗೆ ಮಾತ್ರವಲ್ಲದೇ ಸಂಜೆ ಕೂಡ ಟೀ ಕುಡಿಯುವ ಅಭ್ಯಾಸ ಹೊಂದಿರುತ್ತಾರೆ. ಕೆಲವರು ಊಟಕ್ಕೆ ಮುಂಚೆ ಟೀ, ಕಾಫಿ ಕುಡಿದರೆ ಇನ್ನು ಕೆಲವರು ಊಟದ ನಂತರ ಕುಡಿಯುತ್ತಾರೆ. ಆದರೆ ಈ ಎರಡೂ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂಬ ಗೊಂದಲ ಸಾಕಷ್ಟು ಮಂದಿಗಿದೆ. ನಿಮಗೂ ಈ ಪ್ರಶ್ನೆ ಕಾಡುತ್ತಿದ್ದರೆ ಇದಕ್ಕೆ ಉತ್ತರ ಈ ಕೆಳಗಿನಂತಿದೆ ನೋಡಿ.
ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆ ಮುನ್ಸೂಚನೆ… ಜೂ.22ರಿಂದ 24ರವರೆಗೆ ಆರೆಂಜ್ ಅಲರ್ಟ್!
ಅಜೀರ್ಣ: ಟಿಫನ್ ತಿಂದ ನಂತರ ನಿಮಗೆ ಟೀ ಕುಡಿಯುವ ಅಭ್ಯಾಸವಿದ್ದರೆ ಅದು ನಿಮ್ಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಟಿಫನ್ ಅಥವಾ ಊಟ ತಿಂದ ನಂತರ ಟೀ ಕುಡಿಯುವುದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ನಿಧಾನಗೊಳಿಸಿ ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳುವುದನ್ನು ತಡೆಗಟ್ಟುತ್ತದೆ. ಈ ಕಾರಣದಿಂದಾಗಿ ಆಹಾರವು ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಇದು ಗ್ಯಾಸ್-ಆಸಿಡಿಟಿಯಂತಹ ಸಮಸ್ಯೆಗಳನ್ನು ಉಂಟು ಮಾಡುತ್ತದೆ
ಅಧಿಕ ರಕ್ತದೊತ್ತಡ: ಚಹಾವು ಹೆಚ್ಚಿನ ಕೆಫೀನ್ ಅಂಶವನ್ನು ಹೊಂದಿರುತ್ತದೆ. ಇದು ನಿಮ್ಮ ರಕ್ತದೊತ್ತಡವನ್ನು ಹೆಚ್ಚಿಸುತ್ತದೆ. ಇದರಿಂದ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ನೀವು ಈಗಾಗಲೇ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರೆ, ತಿಂದ ತಕ್ಷಣ ಟೀ ಕುಡಿಯುವುದು ಒಳ್ಳೆಯದಲ್ಲ.
ಕಬ್ಬಿಣದ ಕೊರತೆ: ಟಿಫನ್ ಅಥವಾ ಊಟ ತಿಂದ ತಕ್ಷಣ ಟೀ ಕುಡಿಯುವುದರಿಂದ ದೇಹಕ್ಕೆ ಬೇಕಾದ ಪೋಷಕಾಂಶಗಳು ಸಿಗುವುದಿಲ್ಲ. ಇದು ನಿಮ್ಮ ದೇಹದಲ್ಲಿ ಕಬ್ಬಿಣದ ಕೊರತೆಯನ್ನು ಉಂಟುಮಾಡುತ್ತದೆ. ಇದು ನಿಮ್ಮ ರಕ್ತಹೀನತೆಯ ಅಪಾಯವನ್ನು ಹೆಚ್ಚಿಸುತ್ತದೆ.
ನಿದ್ರಾಹೀನತೆ: ಹೆಚ್ಚು ಟೀ ಕುಡಿಯುವುದರಿಂದ ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗಬಹುದು. ತಿಂದ ತಕ್ಷಣ ಟೀ ಕುಡಿಯುವ ಅಭ್ಯಾಸವಿದ್ದರೆ ಗ್ಯಾಸ್, ಅಜೀರ್ಣ, ಅಸಿಡಿಟಿಯಂತಹ ಸಮಸ್ಯೆಗಳು ಬರುವುದು ಖಂಡಿತ. ಇದು ನಿಮ್ಮ ನಿದ್ರೆಗೆ ಭಂಗ ತರುತ್ತದೆ ಮತ್ತು ನಿಮಗೆ ನಿದ್ರಾಹೀನತೆ ಸಮಸ್ಯೆಯನ್ನು ಉಂಟು ಮಾಡುತ್ತದೆ. ಹಾಗಾಗಿ ತಿಂದ ತಕ್ಷಣ ಟೀ, ಕಾಫಿ ಕುಡಿಯಬಾರದು ಎಂದು ತಜ್ಞರು ಹೇಳುತ್ತಾರೆ
ತಲೆನೋವು: ಚಹಾ ಮಾಡಲು ಬಳಸುವ ಹಾಲಿನಲ್ಲಿ 2.8 ಪ್ರತಿಶತ ಲ್ಯಾಕ್ಟೋಸ್ ಇರುತ್ತದೆ. ಈ ಲ್ಯಾಕ್ಟೋಸ್ ಕೆಲವೊಮ್ಮೆ ಗ್ಯಾಸ್ ಸಮಸ್ಯೆಗೆ ಕಾರಣವಾಗಬಹುದು. ಏಕೆಂದರೆ ಲ್ಯಾಕ್ಟೋಸ್ ಗುಣಲಕ್ಷಣಗಳು ಸಕ್ಕರೆಯನ್ನು ಸುಲಭವಾಗಿ ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತದೆ. ಇದು ಗ್ಯಾಸ್ ಸಮಸ್ಯೆಗೆ ಕಾರಣವಾಗಬಹುದು