ಬೆಲ್ಲ ಮತ್ತು ತುಪ್ಪ, ಈ ಎರಡೂ ಆಹಾರಗಳು ಸಾಮಾನ್ಯವಾಗಿ ಭಾರತೀಯ ಮನೆಗಳಲ್ಲಿ ಕಂಡುಬರುತ್ತವೆ ಮತ್ತು ಈ ಸಂಯೋಜನೆಯನ್ನು ಸಾಮಾನ್ಯವಾಗಿ ಊಟದ ನಂತರ ಸಿಹಿತಿಂಡಿಯಾಗಿ ಸವಿಯಲಾಗುತ್ತದೆ. ಆದರೆ ರುಚಿಯ ಜೊತೆಗೆ, ಬೆಲ್ಲ ಮತ್ತು ತುಪ್ಪವು ಸೈನಸ್ಗಳನ್ನು ತೆರವುಗೊಳಿಸಲು ಮತ್ತು ಶೀತವನ್ನು ತಡೆಯಲು ಸಹಾಯ ಮಾಡುತ್ತದೆ.
Rahul Gandhi: ಮತ್ತೊಮ್ಮೆ ವಿವಾದದಲ್ಲಿ ವಿಪಕ್ಷ ನಾಯಕ: ಬ್ಯಾನ್ ಆದ ಚೀನಿ ಡ್ರೋನ್ ಹಾರಿಸಿದ ರಾಹುಲ್ ಗಾಂಧಿ!
ಬೆಲ್ಲ ಮತ್ತು ತುಪ್ಪ ಇವೆರಡೂ ಆಹಾರದ ರುಚಿಯನ್ನು ಹೆಚ್ಚಿಸುವುದಷ್ಟೇ ಅಲ್ಲದೇ, ಆರೋಗ್ಯಕ್ಕೂ ಇದು ತುಂಬಾ ಪ್ರಯೋಜನಕಾರಿ ಆಗಿದೆ. ಬೆಲ್ಲ ಮತ್ತು ತುಪ್ಪ ಎರಡರಲ್ಲೂ ಸಾಕಷ್ಟು ಪೋಷಕಾಂಶಗಳಿವೆ. ಇವೆರಡನ್ನೂ ಒಟ್ಟಿಗೆ ತಿಂದರೆ, ಆರೋಗ್ಯ ಪ್ರಯೋಜನಗಳು ದ್ವಿಗುಣಗೊಳ್ಳುತ್ತವೆ. ತಜ್ಞರು ಹೇಳುವ ಪ್ರಕಾರ, ಈ ಎರಡು ಪದಾರ್ಥಗಳನ್ನು ಒಟ್ಟಿಗೆ ತಿನ್ನುವುದರಿಂದ ದೇಹಕ್ಕೆ ಹೆಚ್ಚು ಶಕ್ತಿ ದೊರೆಯುತ್ತದೆ.
ಅಲ್ಲದೇ, ಇವೆರಡೂ ನಮ್ಮನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತವೆ. ಸದ್ಯ ಈಗ ಎದ್ದಿರುವ ಪ್ರಶ್ನೆ ಏನೆಂದರೆ, ಬೆಲ್ಲ ಮತ್ತು ತುಪ್ಪವನ್ನು ಒಟ್ಟಿಗೆ ತಿಂದರೆ ಏನಾಗುತ್ತದೆ? ಬೆಲ್ಲ ಮತ್ತು ತುಪ್ಪವನ್ನು ಒಟ್ಟಿಗೆ ತಿನ್ನುವುದರಿಂದ ಸಿಗುವ ಪ್ರಯೋಜನಗಳೇನು? ಈ ಮಿಶ್ರಣವು ಯಾವ ರೋಗಗಳಿಗೆ ಪರಿಣಾಮಕಾರಿಯಾಗಿದೆ? ಬೆಲ್ಲ ಮತ್ತು ತುಪ್ಪ ತಿನ್ನಲು ಸರಿಯಾದ ಮಾರ್ಗ ಯಾವುದು ಎಂಬುವುದರ ಬಗ್ಗೆ ನಾವಿಂದು ತಿಳಿಯೋಣ.
ಬೆಲ್ಲದ ಪೌಷ್ಟಿಕಾಂಶದ ಪ್ರಯೋಜನಗಳು: ಬೆಲ್ಲವನ್ನು ಸಕ್ಕರೆಗೆ ಉತ್ತಮ ಪರ್ಯಾಯವೆಂದು ಪರಿಗಣಿಸಲಾಗುತ್ತದೆ. ಇದು ದೇಹವನ್ನು ರಿಫ್ರೆಶ್ ಮಾಡಲು ಮತ್ತು ಶಕ್ತಿಯನ್ನು ತುಂಬುವ ಕೆಲಸ ಮಾಡುತ್ತದೆ. ಬೆಲ್ಲವು ಕಬ್ಬಿಣ, ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ರಂಜಕದಂತಹ ಖನಿಜಗಳಿಂದ ಸಮೃದ್ಧವಾಗಿದೆ. ವಿಶೇಷವಾಗಿ ಚಳಿಗಾಲದಲ್ಲಿ ಬೆಲ್ಲವನ್ನು ಸೇವಿಸುವುದರಿಂದ ದೇಹದಲ್ಲಿ ಶಾಖವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಶೀತದಿಂದ ರಕ್ಷಿಸುತ್ತದೆ. ಇದರೊಂದಿಗೆ ಬೆಲ್ಲ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಮಲಬದ್ಧತೆಯಂತಹ ಮುಂತಾದ ಸಮಸ್ಯೆಗಳನ್ನು ನಿವಾರಿಸುತ್ತದೆ. ದೇಹದಲ್ಲಿ ರಕ್ತಹೀನತೆ ಸಮಸ್ಯೆ ಇದ್ದರೆ, ಬೆಲ್ಲ ಇದಕ್ಕೆ ಉತ್ತಮ ಪರಿಹಾರವಾಗಿದೆ. ಇದು ರಕ್ತಹೀನತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.
ತುಪ್ಪದ ಪೋಷಕಾಂಶಗಳು ಮತ್ತು ಪ್ರಯೋಜನಗಳು: ಮನೆಯಲ್ಲಿ ತಯಾರಿಸಿದ ತುಪ್ಪದ ಪ್ರಯೋಜನಗಳ ಬಗ್ಗೆ ಅನೇಕ ಮಂದಿಗೆ ತಿಳಿದಿಲ್ಲ. ತುಪ್ಪದಂತಹ ಡೈರಿ ಉತ್ಪನ್ನಗಳು ನಮ್ಮ ಆಹಾರದ ಪ್ರಮುಖ ಭಾಗವಾಗಿದೆ. ಹೀಗಾಗಿ ವೈದ್ಯರು ಮತ್ತು ಆಹಾರ ತಜ್ಞರು ಇವುಗಳನ್ನು ತಿನ್ನಲು ಶಿಫಾರಸು ಮಾಡುತ್ತಾರೆ. ತುಪ್ಪದಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು, ವಿಟಮಿನ್ ಇ, ಕ್ಯಾಲ್ಸಿಯಂ, ವಿಟಮಿನ್ ಡಿ ಇತ್ಯಾದಿಗಳು ಆರೋಗ್ಯಕ್ಕೆ ಪ್ರಯೋಜನಕಾರಿ ಆಗಿದೆ. ಇವುಗಳನ್ನು ತಿನ್ನುವುದರಿಂದ ಮೂಳೆಗಳು ಬಲಗೊಳ್ಳುತ್ತವೆ. ಅವು ಶೀತ ಮತ್ತು ಜ್ವರದ ವಿರುದ್ಧ ಹೋರಾಡಲು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತವೆ. ಇದರೊಂದಿಗೆ ಮೆದುಳು ಕೂಡ ಸಕ್ರಿಯವಾಗಿ ಕೆಲಸ ಮಾಡುತ್ತದೆ. ಒಟ್ಟಾರೆ ಬೆಲ್ಲ ಮತ್ತು ತುಪ್ಪವನ್ನು ಒಟ್ಟಿಗೆ ತಿನ್ನುವುದರಿಂದ ಏನೆಲ್ಲಾ ಪ್ರಯೋಜನಗಳು ಸಿಗುತ್ತವೆ ಎಂಬುವುದರ ಈ ಕೆಳಗೆ ಒಂದಷ್ಟು ಮಾಹಿತಿ ಇದೆ.
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ: ಬೆಲ್ಲ ಮತ್ತು ತುಪ್ಪ ಎರಡೂ ಜೀರ್ಣಕ್ರಿಯೆಯನ್ನು ಹೆಚ್ಚಿಸಲು ಹಾಗೂ ಆಹಾರವನ್ನು ಸುಲಭವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಜೊತೆಗೆ ಮಲಬದ್ಧತೆ ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳು ನಿವಾರಣೆಯಾಗುತ್ತವೆ. ಬೆಲ್ಲ ಮತ್ತು ತುಪ್ಪ ಕರುಳಿಗೆ ತುಂಬಾ ಪ್ರಯೋಜನಕಾರಿ ಆಗಿದ್ದು, ಇದು ಮಲಬದ್ಧತೆ ಹಾಗೂ ಹೊಟ್ಟೆ ಉಬ್ಬರದಂತಹ ಸಮಸ್ಯೆಗಳನ್ನು ತಡೆಯುತ್ತದೆ.
ಶಕ್ತಿಯನ್ನು ಹೆಚ್ಚಿಸುತ್ತದೆ: ಬೆಲ್ಲವು ನೈಸರ್ಗಿಕ ಸಕ್ಕರೆ ಅಂಶವನ್ನು ಹೊಂದಿದ್ದು, ಇದು ದೇಹಕ್ಕೆ ತ್ವರಿತ ಶಕ್ತಿಯನ್ನು ಒದಗಿಸುತ್ತದೆ. ಹಾಗಾಗಿಯೇ ಊಟದ ನಂತರ ಬೆಲ್ಲ ಮತ್ತು ತುಪ್ಪವನ್ನು ತಿನ್ನಲು ಸಲಹೆ ನೀಡಲಾಗುತ್ತದೆ. ಏಕೆಂದರೆ, ಈ ಸಮಯದಲ್ಲಿ ಬೆಲ್ಲ ಮತ್ತು ತುಪ್ಪ ತಿನ್ನುವುದರಿಂದ ಆಯಾಸ ಹಾಗೂ ದೌರ್ಬಲ್ಯ ದೂರವಾಗುತ್ತದೆ. ಅಲ್ಲದೇ, ದೇಹವು ತಾಜಾತನವನ್ನು ಅನುಭವಿಸುತ್ತದೆ.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ತುಪ್ಪದಲ್ಲಿ ವಿಟಮಿನ್ ಎ ಮತ್ತು ಇ ಇದ್ದು, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅಲ್ಲದೇ, ಬೆಲ್ಲ ಮತ್ತು ತುಪ್ಪವನ್ನು ಸೇವಿಸುವುದರಿಂದ ಶೀತ, ಕೆಮ್ಮು ಮತ್ತು ಇತರ ಸೋಂಕುಗಳ ಅಪಾಯ ಕಡಿಮೆಯಾಗುತ್ತದೆ.
ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿ: ತುಪ್ಪದಲ್ಲಿರುವ ಕೊಬ್ಬಿನಾಮ್ಲಗಳು ಚರ್ಮವನ್ನು ಒಳಗಿನಿಂದ ಪೋಷಿಸಿ ಅದನ್ನು ಕಾಂತಿಯುತವಾಗಿಸುತ್ತದೆ. ಅಲ್ಲದೇ, ತುಪ್ಪವು ಕೂದಲನ್ನು ಬಲವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ. ಜೊತೆಗೆ ಕೂದಲು ಉದುರುವಿಕೆಯನ್ನು ತಡೆಯುತ್ತದೆ.
ಬೆಲ್ಲ-ತುಪ್ಪ ಸೇವನೆಯ ಇತರ ಪ್ರಯೋಜನಗಳು: ತುಪ್ಪದಲ್ಲಿ ಕ್ಯಾಲ್ಸಿಯಂ ಇದ್ದು, ಇದು ಮೂಳೆಗಳನ್ನು ಬಲಪಡಿಸುತ್ತದೆ. ತುಪ್ಪದಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳಿದ್ದು, ಇದು ಮೆದುಳಿಗೆ ತುಂಬಾ ಪ್ರಯೋಜನಕಾರಿ ಆಗಿದೆ. ಇದರೊಂದಿಗೆ, ಬೆಲ್ಲ ಮುಟ್ಟಿನ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.