ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿ ನಾಲ್ಕು ತಿಂಗಳು ಕಳೆದಿವೆ. ಚಾರ್ಜ್ಶೀಟ್ ಸಲ್ಲಿಕೆ ಬಳಿಕ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಅವರು ಜಾಮೀನಿಗಾಗಿ ಸಾಕಷ್ಟು ಪ್ರಯತ್ನ ಮಾಡುತ್ತಲೇ ಬಂದಿದ್ದರು. ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಜಾಮೀನು ಕೊಡಲು ನಿರಾಕರಿಸಿದೆ.
ಇದರ ಬೆನ್ನಲ್ಲೇ ದರ್ಶನ್ಗೆ ಬೆನ್ನುನೋವು ಕಾಣಿಸಿಕೊಂಡಿದೆ. ಅವರಿಗೆ ಸರಿಯಾಗಿ ಕೂರಲೂ ಸಾಧ್ಯವಾಗುತ್ತಿಲ್ಲ. ನಡೆಯಲು ಸಹ ಬಹಳ ಕಷ್ಟಪಡುವ ಸ್ಥಿತಿ ತಲುಪಿದ್ದಾರೆ. ಚಿಕಿತ್ಸೆ ಕೊಡಿಸಿರೆಂದು ಅಧಿಕಾರಿಗಳ ಬಳಿ ಗೋಗರೆಯುತ್ತಿದ್ದಾರಂತೆ ನಿನ್ನೆ ವಕೀಲ ರಾಮ್ ಸಿಂಗ್, ದರ್ಶನ್ ಭೇಟಿಗಾಗಿ ಬಳ್ಳಾರಿ ಜೈಲಿಗೆ ಆಗಮಿಸಿದ್ದರು.
ಪ್ರತಿರಾತ್ರಿ ಮೊಸರು ತಿನ್ನುತ್ತಿದ್ರೆ, ಇಂದಿನಿಂದ ಆ ಅಭ್ಯಾಸ ಬಿಟ್ಬಿಡಿ: ಆಯುರ್ವೇದ ತಜ್ಞರ ಸಲಹೆ ಹೀಗಿದೆ
ಸಂದರ್ಶಕರ ಕೊಠಡಿಗೆ ಬರುವಾಗ ಬೆನ್ನನ್ನು ಪದೇ ಪದೇ ಮುಟ್ಟಿಕೊಳ್ಳುತ್ತಾ ನೋವಿನಲ್ಲಿಯೇ ಸಂದರ್ಶಕರ ಕೊಠಡಿಗೆ ದರ್ಶನ್ ಬಂದರು. ಹೆಚ್ಚು ಸಮಯ ನಿಲ್ಲಲು ಸಹ ಆಗದೆ ಗೋಡೆಯ ಆಸರೆ ಪಡೆದು ಹೈಸೆಕ್ಯುರಿಟಿ ಸೆಲ್ ಮುಂದೆ ನಿಂತಿದ್ದರು ದರ್ಶನ್. ದರ್ಶನ್ಗೆ ಜೈಲಿನಲ್ಲಿ ಫಿಜಿಯೋಥೆರಪಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾಗಿದ್ದರೂ ಸಹ ಬೆನ್ನು ನೋವು ಕಡಿಮೆ ಆಗಿಲ್ಲ. ದರ್ಶನ್ರ ಬೆನ್ನಿನ ಎಲ್1 ಹಾಗೂ ಎಲ್5 ಭಾಗದಲ್ಲಿ ತೀವ್ರವಾಗಿ ನೋವಿದ್ದು, ಶಸ್ತ್ರಚಿಕಿತ್ಸೆಯ ಅಗತ್ಯ ಇದೆಯೆಂದು ವೈದ್ಯರು ಸಲಹೆ ನೀಡಿದ್ದಾರೆ. ಬೆನ್ನು ನೋವಿಗೆ ಶೀಘ್ರ ಚಿಕಿತ್ಸೆಯ ಅಗತ್ಯ ಇದ್ದು, ದರ್ಶನ್, ತಮ್ಮನ್ನು ಬೆಂಗಳೂರಿಗೆ ಕಳಿಸುವಂತೆ, ಅಲ್ಲಿ ತಮ್ಮ ವೈದ್ಯರ ಬಳಿ ತಾನು ಚಿಕಿತ್ಸೆ ಪಡೆದುಕೊಳ್ಳುವುದಾಗಿ ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ. ತಮ್ಮನ್ನು ಬೆಂಗಳೂರಿಗೆ ಕಳಿಸುವಂತೆ ಅಧಿಕಾರಿಗಳ ಬಳಿ ದರ್ಶನ್ ಗೋಗರೆದಿದ್ದಾರೆ ಎನ್ನಲಾಗುತ್ತಿದೆ.